ತುಮಕೂರು/ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು 9 ಮಂದಿ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 18,759ಕ್ಕೆ ಏರಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 215 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈವರೆಗೆ 28,782 ಮಂದಿಗೆ ಕೋವಿಡ್ ದೃಢಪಟ್ಟಿದೆ. 302 ಮಂದಿ ಗುಣಮುಖರಾಗಿದ್ದು ಈವರೆಗೆ 25,287 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 2,845 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 2,33,288 ಮಂದಿಗೆ ತಪಾಸಣೆ ನಡೆಸಲಾಗಿದ್ದು ಇವರಲ್ಲಿ 2,04,506 ಮಂದಿಗೆ ನೆಗೆಟಿವ್ ಬಂದಿದೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ 8,841 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು ರೂ. 10,14,830 ದಂಡ ವಸೂಲಿ ಮಾಡಲಾಗಿದೆ.
ತುಮಕೂರು ಜಿಲ್ಲೆಯಲ್ಲಿ 193 ಮಂದಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 18,759ಕ್ಕೆ ಏರಿಕೆಯಾಗಿದೆ. ತುಮಕೂರು - 84, ಪಾವಗಡ - 18, ಕುಣಿಗಲ್ -15, ಕೊರಟಗೆರೆ - 14, ಮಧುಗಿರಿ -12 , ತಿಪಟೂರು -13, ಚಿಕ್ಕನಾಯಕನಹಳ್ಳಿ - 11 , ಶಿರಾ -10 , ತುರುವೇಕೆರೆ ಮತ್ತು ಗುಬ್ಬಿ ತಾಲ್ಲೂಕಿನಲ್ಲಿ ತಲಾ 8 ಮಂದಿಗೆ ಸೋಂಕು ತಗುಲಿದೆ. 286 ಮಂದಿ ಸೋಂಕಿತರು ಸಂಪೂರ್ಣ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 16,535 ಮಂದಿ ಗುಣಮುಖರಾಗಿದ್ದಾರೆ. ಇನ್ನು 1,834 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಮೂವರು ಮೃತಪಟ್ಟಿದ್ದು ಮೃತರ ಸಂಖ್ಯೆ 249ಕ್ಕೇರಿಕೆಯಾಗಿದೆ.