ETV Bharat / state

ಶಿರಾ ಬಳಿ ಲಾರಿ ಮತ್ತು ಕ್ರೂಸರ್ ನಡುವೆ ಡಿಕ್ಕಿ.. 9 ಮಂದಿ ದುರ್ಮರಣ

author img

By

Published : Aug 25, 2022, 7:31 AM IST

Updated : Aug 25, 2022, 9:08 AM IST

ಲಾರಿ ಮತ್ತು ಕ್ರೂಸರ್ ಮಧ್ಯೆ ಡಿಕ್ಕಿಯಾಗಿ 9 ಜನ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ನಡೆದಿದೆ.

ಶಿರಾ ಬಳಿ ಲಾರಿ ಮತ್ತು ಕ್ರೂಸರ್ ನಡುವೆ ಡಿಕ್ಕಿ

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಬಾಲೆನಹಳ್ಳಿ ಗೇಟ್ ಬಳಿ ಇಂದು ತಡರಾತ್ರಿ ಲಾರಿ ಕ್ರೂಸರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 9 ಮಂದಿ ಮೃತಪಟ್ಟಿದ್ದು, 12 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಕೂಲಿ ಕಾರ್ಮಿಕರಾಗಿದ್ದು, ರಾಯಚೂರು ಮತ್ತು ಮಾನ್ವಿ ಮೂಲದವರು ಎನ್ನಲಾಗಿದೆ. ಕ್ರೂಸರ್​ನಲ್ಲಿ 23 ಜನರಿದ್ದು, ಮಾನ್ವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಲಾರಿ ಮತ್ತು ಕ್ರೂಸರ್ ಮಧ್ಯೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಸ್​ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೃತಪಟ್ಟವರನ್ನು ಕ್ರೂಸರ್ ಚಾಲಕ ಕೃಷ್ಣಪ್ಪ, ಸುಜಾತ, ವಿನೋದ್, ಲಕ್ಷ್ಮೀ ಎಂದು ಗುರುತಿಸಲಾಗಿದೆ. ಇನ್ನುಳಿದವರ ಹೆಸರು ತಿಳಿದುಬಂದಿಲ್ಲ.

(ಇದನ್ನೂ ಓದಿ: ವಾಷಿಂಗ್ಟನ್​ ಡಿಸಿಯಲ್ಲಿ ಗುಂಡಿನ ಮೊರೆತ.. ದಾಳಿಯಲ್ಲಿ ಇಬ್ಬರ ಸಾವು, ಮೂವರಿಗೆ ಗಾಯ)

Last Updated : Aug 25, 2022, 9:08 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.