ETV Bharat / state

ತುಮಕೂರಿನಲ್ಲಿ 90 ನಕಲಿ ವೈದ್ಯರು ಪತ್ತೆ: ಕಟ್ಟುನಿಟ್ಟಿನ ಸೂಚನೆಗೆ ಡಿಸಿ ಸೂಚನೆ - fake doctors news

ತುಮಕೂರು ಜಿಲ್ಲೆಯಲ್ಲಿ 90 ಮಂದಿ ನಕಲಿ ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. ವೈದ್ಯಕೀಯ ಅರ್ಹತೆ ಇಲ್ಲದಿದ್ದರೂ ವೈದ್ಯ ವೃತ್ತಿ ನಡೆಸುತ್ತಿರುವ ನಕಲಿ ವೈದ್ಯರು/ಕ್ಲಿನಿಕ್​ಗಳಿಗೆ ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್​ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

fake doctors
fake doctors
author img

By

Published : Jul 31, 2021, 2:03 PM IST

ತುಮಕೂರು: ಜಿಲ್ಲೆಯಲ್ಲಿ 90 ಮಂದಿ ನಕಲಿ ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ನಕಲಿ ವೈದ್ಯರ ಹೆಸರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು ಹಾಗೂ ಕ್ಲಿನಿಕ್​ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಾಕೀತು ಮಾಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಸಮಗ್ರ ರೋಗಗಳ ಕಣ್ಗಾವಲು ಸಮಿತಿ, ಜಿಲ್ಲಾ ಆರೋಗ್ಯ ಸಮಿತಿ, ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣ, ಜಿಲ್ಲಾ ತಂಬಾಕು ನಿಯಂತ್ರಣ ಸೇರಿದಂತೆ ವಿವಿಧ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿ ತಪ್ಪಿಸಲು ಆರೋಗ್ಯ ಇಲಾಖೆ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು. ಜೊತೆಗೆ ನಕಲಿ ವೈದ್ಯರ ಬಗ್ಗೆ ಮಾಹಿತಿ ಸಿಕ್ಕ ತಕ್ಷಣವೇ ಅವರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಬೇಕು. ನಕಲಿ ವೈದ್ಯರ ಹಾವಳಿಗೆ ಕಡಿವಾಣ ಹಾಕಲು ಬೇಕಾದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದರು.

ತಾಯಿ, ಶಿಶು ಮರಣ ತಗ್ಗಿಸಿ:

ಜಿಲ್ಲೆಯಲ್ಲಿ ಶಿಶು ಮತ್ತು ತಾಯಿ ಮರಣದ ಪ್ರಮಾಣವನ್ನು ದಿನದಿಂದ ದಿನಕ್ಕೆ ಕಡಿಮೆ ಮಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಹೆಚ್ಚು ತಾಯಿ-ಶಿಶು ಮರಣಗಳಾಗುತ್ತಿರುವ ಆಸ್ಪತ್ರೆಗಳನ್ನು ಗುರುತಿಸಿ, ಅಂತಹ ಆಸ್ಪತ್ರೆ ವ್ಯಾಪ್ತಿಯ ಪ್ರದೇಶಗಳಲ್ಲಿ ಅಗತ್ಯ ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಮಕ್ಕಳಿಗೂ ಪೌಷ್ಟಿಕ ಆಹಾರವನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ಸೂಚಿಸಿದರು.

ಸಹಜ ಹೆರಿಗೆ ಪ್ರಮಾಣ ಹೆಚ್ಚಾಗಬೇಕು. ಗರ್ಭಿಣಿಯರ ಮತ್ತು ಬಾಣಂತಿಯರ ಆರೋಗ್ಯ ಪರಿಸ್ಥಿತಿ ಕುರಿತು ಸಮಗ್ರ ಮಾಹಿತಿ ಸದಾ ಲಭ್ಯವಿರುವಂತೆ ಜಿಲ್ಲೆಯಲ್ಲಿರುವ ಎಲ್ಲಾ ಗರ್ಭಿಣಿ/ಬಾಣಂತಿಯರ ನೋಂದಣಿಯನ್ನು ಕಡ್ಡಾಯವಾಗಿ ಮಾಡಬೇಕು. ಇದರಿಂದ ಅವರಿಗೆ ತುರ್ತು ಸಂದರ್ಭಗಳಲ್ಲಿ ಸರಿಯಾದ ಆರೋಗ್ಯ ಸೇವೆ ಒದಗಿಸಲು ಸುಲಭವಾಗಲಿದೆ ಎಂದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿಯೇ ಹೆರಿಗೆಗಳು ನಡೆಯುವಂತೆ ಕ್ರಮ ಕೈಗೊಳ್ಳಬೇಕು. ಅಗತ್ಯವಿರುವ ಸಂದರ್ಭದಲ್ಲಿ ಮಾತ್ರ ಸಿಜೇರಿಯನ್ ಹೆರಿಗೆ ಮಾಡಬೇಕು. ಸಹಜ ಹೆರಿಗೆಗಳ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ನಿರ್ದೇಶಿಸಿದರು.

ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಿ:

ಮಳೆಗಾಲದಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಡೆಂಗ್ಯೂ, ಚಿಕನ್​ ಗುನ್ಯಾ ಒಳಗೊಂಡಂತೆ ಯಾವುದೇ ಪ್ರಕರಣಗಳು ವರದಿಯಾದಲ್ಲಿ ಅಥವಾ ದೂರುಗಳು ಬಂದಲ್ಲಿ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ನಡೆಸುವುದರೊಂದಿಗೆ ಲಾರ್ವಾ ಸಮೀಕ್ಷೆಯನ್ನು ಸಮರ್ಪಕವಾಗಿ ನಡೆಸಬೇಕು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.