ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಬದಿಯ ಹಳ್ಳಕ್ಕೆ ತಲೆಕೆಳಗಾಗಿ ಬಿದ್ದ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಬಳಿ ನಡೆದಿದೆ.
ಎದುರುಗಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋಗಿ ಕಾರನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳಲಾಗದೆ ಈ ಅವಘಡ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.