ತುಮಕೂರು: ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಸುಮಾರು ದಶಕಗಳ ಹಳೆಯದಾದ ಬೇವಿನ ಮರ ಧರೆಗುರುಳಿದಿದ್ದು, ಅದೃಷ್ಟವಶಾತ್ ಮರದ ಕೆಳಗೆ ಕುಳಿತಿದ್ದ ವಿದ್ಯಾರ್ಥಿಗಳ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ.
ಮರ ಬೀಳೋ ಶಬ್ಧಕ್ಕೆ ವಿದ್ಯಾರ್ಥಿಗಳು ದಿಕ್ಕಾಪಾಲಾಗಿ ಓಡಿದ್ದಾರೆ. ಹಾಗಾಗಿ ಮರದ ಕೆಳಗಡೆಯೇ ಟೆಸ್ಟ್ ಬರೆಯುತ್ತಿದ್ದ ನೂರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 100ವರ್ಷ ಹಳೆಯ ಕಟ್ಟಡದಲ್ಲಿ ಶೈಕ್ಷಣಿಕ ವ್ಯವಸ್ಥೆ ಹದಗೆಟ್ಟಿದ್ದು ಸಮಸ್ಯೆ ಬಗೆಹರಿಸುವಂತೆ ವಿದ್ಯಾರ್ಥಿನಿಯರು ಧರಣಿ ನಡೆಸಿ, ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿದರು.
ವಿಷಯ ತಿಳಿದು ಸ್ಥಳಕ್ಕೆ ಬಂದಂತಹ ಸಂಸದ ಜಿಎಸ್ ಬಸವರಾಜ ಕಾಲೇಜು ಕಟ್ಟಡವನ್ನು ಬೇರೆಡೆ ಸ್ಥಳಾಂತರಿಸುವಂತೆ ಶಿಕ್ಷಣ ಸಚಿವರಲ್ಲಿ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದ ಆವರಣದಲ್ಲಿ ಹತ್ತಕ್ಕೂ ಹೆಚ್ಚು ಹಳೆಯದಾದ ಬೃಹತ್ ಮರಗಳಿದ್ದು ಅದನ್ನು ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.