ತುಮಕೂರು : ಕೌಟುಂಬಿಕ ಕಲಹದಿಂದ ವ್ಯಕ್ತಿಯೊಬ್ಬ ಹಾಡಹಗಲೇ ಉದ್ಯಾನವನದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರಘು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ತುಮಕೂರು ನಗರದ ಶಿರಾಗೇಟ್ನ ವೃತ್ತದಲ್ಲಿ ಇರುವ ಉದ್ಯಾನವನದಲ್ಲಿ ಘಟನೆ ನಡೆದಿದೆ.
ಜನರು ನೋಡನೋಡುತ್ತಿದ್ದಂತೆ ಈತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.