ETV Bharat / state

ರೈತರ ಹೋರಾಟ ಬೆಂಬಲಿಸಿ ಜ.20 ರಿಂದ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

author img

By

Published : Jan 15, 2021, 4:54 PM IST

Updated : Jan 15, 2021, 5:24 PM IST

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲವಾಗಿ ಕರ್ನಾಟಕದಲ್ಲಿ ಜನವರಿ 20 ರಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು. ಈ ಪ್ರತಿಭಟನೆ ಕೇವಲ ಕಾಂಗ್ರೆಸ್ ಪಕ್ಷದ ಮುಖಂಡರು, ಸದಸ್ಯರಿಗೆ ಸೀಮಿತವಾಗಿರದೆ ಎಲ್ಲಾ ಪ್ರಗತಿಪರ ಸಂಘಟನೆಗಳು ನಮ್ಮ ಪ್ರತಿಭಟನೆಯಲ್ಲಿ ಕೈಜೋಡಿಸಲಿವೆ ಎಂದು ಕೆಪಿಸಿಸಿ ಮಾಧ್ಯಮ ಉಸ್ತುವಾರಿ ಸುದರ್ಶನ್ ತಿಳಿಸಿದರು.

A statewide protest from January 20 in support of the farmers' protest in Delhi
ದೆಹಲಿಯಲ್ಲಿ ರೈತರ ಪ್ರತಿಭಟನೆ ಬೆಂಬಲಿಸಿ ಜನವರಿ 20 ರಿಂದ ರಾಜ್ಯದಾದ್ಯಂತ ಪ್ರತಿಭಟನೆ

ತುಮಕೂರು: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲವಾಗಿ ಕರ್ನಾಟಕದಲ್ಲಿ ಜನವರಿ 20 ರಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು. ಈ ಪ್ರತಿಭಟನೆ ಕೇವಲ ಕಾಂಗ್ರೆಸ್ ಪಕ್ಷದ ಮುಖಂಡರು, ಸದಸ್ಯರಿಗೆ ಸೀಮಿತವಾಗಿರದೆ ಎಲ್ಲಾ ಪ್ರಗತಿಪರ ಸಂಘಟನೆಗಳು ಕೈಜೋಡಿಸಲಿವೆ ಎಂದು ಕೆಪಿಸಿಸಿ ಮಾಧ್ಯಮ ಉಸ್ತುವಾರಿ ಸುದರ್ಶನ್ ತಿಳಿಸಿದರು.

ರೈತರ ಹೋರಾಟ ಬೆಂಬಲಿಸಿ ಜ.20 ರಿಂದ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 50 ದಿನಗಳಿಂದ ರಾಜಧಾನಿ ದೆಹಲಿಯಲ್ಲಿ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ, ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆ ದೇಶದ ಗಮನವನ್ನು ಅಷ್ಟೇ ಅಲ್ಲದೇ, ವಿದೇಶದ ಗಮನವನ್ನು ಸೆಳೆದಿದ್ದು, ಆ ದೇಶದ ಪ್ರಮುಖರು ಸಹ ಈ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಇಂತಹ ಸಂದರ್ಭದಲ್ಲಿಯೂ ಸಹ ಕೇಂದ್ರದ ಬಿಜೆಪಿ ಸರ್ಕಾರ ಪ್ರತಿಭಟನೆಗೆ ಮಣಿಯದಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರ ನಿರಂತರವಾಗಿ ರೈತ ವಿರೋಧಿ ನಿಲುವನ್ನು ತಾಳುತ್ತಾ ಬಂದಿದೆ. ರಾಜಕೀಯ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಜನರ ಭಾವನೆಗಳೊಂದಿಗೆ ಬಿಜೆಪಿ ಸರ್ಕಾರ ಆಟವಾಡುತ್ತಿದೆ ಎಂದು ಆರೋಪಿಸಿದರು.

ದೇಶದಲ್ಲಿ ಶೇಕಡ 80ರಿಂದ 82ರಷ್ಟು ಸಣ್ಣ ಹಾಗೂ ಮಧ್ಯಮವರ್ಗದ ರೈತರಿದ್ದಾರೆ, ಅವರ ಹಿತವನ್ನು ನೀವು ಹೇಗೆ ಕಾಪಾಡಲು ಹೊರಟಿದ್ದೀರಾ? ಅವರಲ್ಲಿರುವ ಆತಂಕವನ್ನು ಹೇಗೆ ನಿವಾರಣೆ ಮಾಡುತ್ತೀರಿ ಎಂದು ಪ್ರಶ್ನಿಸಿದರು. ಅಲ್ಲದೆ ಜನವರಿ 26ರಂದು, ರೈತರು ಟ್ರ್ಯಾಕ್ಟರ್ ಗಳ ಮೂಲಕ ರ್ಯಾಲಿ ಮಾಡಲು ಹೊರಟಿದ್ದಾರೆ, ಇದರಿಂದ ಪ್ರಪಂಚದ ಎದುರು ದೇಶಕ್ಕೆ ಮುಜುಗರವಾಗುತ್ತದೆ ಎಂದು, ರೈತರೊಡನೆ ಮತ್ತೊಮ್ಮೆ ಮಾತುಕತೆಗೆ ಮುಂದಾಗಿದ್ದೀರಾ ಎಂದರೆ ನಿಮಗೆ ಸರ್ಕಾರದಲ್ಲಿ ನೈತಿಕವಾಗಿ ಮುಂದುವರೆಯುವ ಜವಾಬ್ದಾರಿಯನ್ನು ಕಳೆದುಕೊಂಡಿದ್ದೀರಾ ಎಂದು ಬಿಜೆಪಿ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದರು.

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲವಾಗಿ ಕರ್ನಾಟಕದಲ್ಲಿ ಜನವರಿ 20 ರಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು. ಈ ಪ್ರತಿಭಟನೆ ಕೇವಲ ಕಾಂಗ್ರೆಸ್ ಪಕ್ಷದ ಮುಖಂಡರು, ಸದಸ್ಯರಿಗೆ ಸೀಮಿತವಾಗಿರದೆ ಎಲ್ಲಾ ಪ್ರಗತಿಪರ ಸಂಘಟನೆಗಳು ನಮ್ಮ ಪ್ರತಿಭಟನೆಯಲ್ಲಿ ಕೈಜೋಡಿಸಲಿವೆ ಎಂದು ತಿಳಿಸಿದರು.

ಹರಿಯಾಣದ ಮುಖ್ಯಮಂತ್ರಿ ಹೇಳುತ್ತಾರೆ, ರಾಜಸ್ಥಾನದಿಂದ ಬರುವಂತಹ ಕೃಷಿ ಉತ್ಪನ್ನಗಳನ್ನು ಇಲ್ಲಿ ಮಾರಾಟ ಮಾಡಬಾರದು ಎಂದು, ಅದೇ ರೀತಿ ಮಧ್ಯಪ್ರದೇಶದ ಮುಖ್ಯಮಂತ್ರಿಗಳು ಹೇಳುತ್ತಾರೆ ನಮ್ಮ ರಾಜ್ಯದ ಕೃಷಿ ಉತ್ಪನ್ನಗಳನ್ನು ಹೊರತುಪಡಿಸಿ, ಹೊರರಾಜ್ಯದ ಯಾವುದೇ ಕೃಷಿ ಉತ್ಪನ್ನಗಳನ್ನು ನಮ್ಮ ರಾಜ್ಯದಲ್ಲಿ ಮಾರಾಟ ಮಾಡಬಾರದು ಎಂದು. ಇನ್ನು ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳುತ್ತಾರೆ ದೇಶದ ಯಾವುದೇ ಭಾಗದಲ್ಲಾದರೂ ನೇರವಾಗಿ ರೈತರು ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬಹುದು ಎಂದು ಎಲ್ಲರೂ ದ್ವಂದ್ವ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದರು.

Last Updated : Jan 15, 2021, 5:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.