ತುಮಕೂರು: ತುಮಕೂರು ಹೊರವಲಯದ ಊರುಕೆರೆಯಲ್ಲಿರುವ ಖಾಸಗಿ ಶಾಲೆ ವಿದ್ಯಾರ್ಥಿಗೆ ಕೊರೊನಾ ದೃಢಪಟ್ಟಿದ್ದು, ಶಾಲೆಗೆ 7 ದಿನ ರಜೆ ಘೋಷಿಸಲಾಗಿದೆ. ಪೋಷಕರಿಂದ ವಿದ್ಯಾರ್ಥಿಗೆ ಸೋಂಕು ತಗುಲಿರುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗೆ ರಜೆ ನೀಡಲಾಗಿದೆ.
ಸೋಂಕಿತ ವಿದ್ಯಾರ್ಥಿಯ ಸಂಪರ್ಕಕ್ಕೆ ಬಂದ ಇತರೆ ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ಅದ್ರಲ್ಲಿ 28 ವಿದ್ಯಾರ್ಥಿಗಳ ಪರೀಕ್ಷಾ ವರದಿಗೆ ಕಾಯಲಾಗುತ್ತಿದೆ. 1 ರಿಂದ 10ನೇ ತರಗತಿವರೆಗೂ ನಡೆಯುವ ಶಾಲೆಯಾಗಿದ್ದು, ಶಾಲೆಯಲ್ಲಿ 700 ಮಕ್ಕಳಿದ್ದು, 9ನೇ ತರಗತಿಯ 34 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ವಿದ್ಯಾರ್ಥಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 6 ಮಕ್ಕಳ ಟೆಸ್ಟ್ನಲ್ಲಿ ನೆಗೆಟಿವ್ ವರದಿ ಬಂದಿದೆ.
ಪ್ರತಿ ದಿನ ಶಾಲೆಯಲ್ಲಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಶಿಕ್ಷಕರಿಗೂ ಕೂಡ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗೆ ಆನ್ಲೈನ್ ಮೂಲಕ ಪಾಠ ಹೇಳಿಕೊಡಲಾಗುತ್ತಿದೆ ಎಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಬಸವರಾಜು ಹೇಳಿದ್ದಾರೆ.
ಇದನ್ನೂ ಓದಿ: ಟ್ರ್ಯಾಕ್ಟರ್ ರ‍್ಯಾಲಿ : ಸ್ಪೀಕರ್ ಸೂಚನೆ ಮೇರೆಗೆ ಸುವರ್ಣಸೌಧದ ಒಳಗೆ ಕೈ ನಾಯಕರ ಪ್ರತಿಭಟನಾ ಮೆರವಣಿಗೆ ಎಂಟ್ರಿ