ಶಿವಮೊಗ್ಗ: ಧಾರಾಕಾರ ಮಳೆಗೆ ತೀರ್ಥಹಳ್ಳಿಯಲ್ಲಿ ಮರ ಧರೆಗುರುಳಿದೆ. ತೀರ್ಥಹಳ್ಳಿ ಪಟ್ಟಣದ ಕುಶಾವತಿ ಸಮೀಪದ ಸಹ್ಯಾದ್ರಿ ಶಾಲೆಯ ಬಳಿ ಬೃಹತ್ ಗಾತ್ರದ ಮರ ಬಿದ್ದಿದೆ.
ನಿನ್ನೆ ರಾತ್ರಿಯಿಂದ ಬಿಡದೆ ಸುರಿಯುತ್ತಿರುವ ಮಳೆ ಹಾಗೂ ಗಾಳಿಯಿಂದ ಮರ ಧರೆಗುರುಳಿದೆ. ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮರ ತೆರವು ಕಾರ್ಯ ನಡೆಸುತ್ತಿದ್ದಾರೆ.