ETV Bharat / state

ತುಮಕೂರು: ನಿಂತಿದ್ದ ಬಸ್ ಗೆ ಟಿಟಿ ಡಿಕ್ಕಿ: ಇಬ್ಬರು ಸಾವು - ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಅಪಘಾತ

ಬಸ್​ಗೆ ಟಿಟಿ ಗುದ್ದಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಅಪಘಾತ
ಅಪಘಾತ
author img

By

Published : May 25, 2023, 2:52 PM IST

Updated : May 25, 2023, 3:10 PM IST

ತುಮಕೂರು: ಶಾಲಾ ಕಾಲೇಜುಗಳಿಗೆ ಬೇಸಿಗೆ ರಜೆ ಇರುವ ಹಿನ್ನೆಲೆ ಈ ಅವಧಿಯಲ್ಲಿ ಬಹುತೇಕ ಜನರು ತಮ್ಮ ತಮ್ಮ ಕುಟುಂಬಸ್ಥರೊಂದಿಗೆ ಪ್ರವಾಸ ಕೈಗೊಳ್ಳುವುದು ಸಹಜ. ಅಂತೆಯೇ ರಾಯಚೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದ 11 ಜನರಿಗೆ ಮಾರ್ಗಮಧ್ಯೆ ಜವರಾಯ ಅಡ್ಡಿಯಾಗಿದ್ದಾನೆ. ರಸ್ತೆಯಲ್ಲಿ ನಿಂತಿದ್ದ ಬಸ್​ಗೆ ಟಿಟಿ ವಾಹನ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದ ಡಿ. ಹೊಸಹಳ್ಳಿ ಬಳಿ ನಡೆದಿದೆ. ಮೃತರನ್ನು ವೀರೇಶ್ (30) ಶಶಿಕಲಾ (79) ಎಂದು ಗುರುತಿಸಲಾಗಿದೆ. ಮೃತರು ರಾಯಚೂರು ಜಿಲ್ಲೆಯ ಸಿಂಧನೂರಿನವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಾಲ್ಕು ಮಂದಿಗೆ ಗಾಯ.. ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ, ಪ್ರತೀಕ್ಷಾ ಎಂಬುವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಂಧನೂರಿನಿಂದ ಮೈಸೂರಿಗೆ ಶಶಿಕಲಾ ಕುಟುಂಬಸ್ಥರು ಪ್ರವಾಸಕ್ಕೆ ಹೊರಟಿದ್ದರು. ಮಾರ್ಗ ಮಧ್ಯೆ ಡಿ. ಹೊಸಹಳ್ಳಿ ಬಳಿ ನಿಂತಿದ್ದ ಖಾಸಗಿ ಬಸ್​ಗೆ ಟಿಟಿ ಡಿಕ್ಕಿ ಹೊಡೆದಿದೆ. ಟಿಟಿ ವಾಹನದಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದರು. ಈ ಸಂಬಂಧ ಹುಲಿಯೂರು ದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ.. ಖಾಸಗಿ ಕಂಪನಿಗಳು ಹಾಗೂ ಹೆಚ್​ಎಎಲ್​ನಲ್ಲಿ ಸ್ಥಳೀಯರಿಗೆ ಉದ್ಯೋಗ ಅವಕಾಶ ನೀಡದಿದ್ದರೆ ಲೈಸೆನ್ಸ್ ರದ್ದು: ಸಚಿವ ಪರಮೇಶ್ವರ್

ಎಜುಕೇಶನ್ ಕಿಟ್ ಪಡೆಯಲು ವಿದ್ಯಾರ್ಥಿಗಳು ಮತ್ತು ಪೋಷಕರಿಂದ ನೂಕು ನುಗ್ಗಲು: ಸರ್ಕಾರದಿಂದ ನೀಡಲಾಗುವ ಎಜುಕೇಶನ್ ಕಿಟ್ ಪಡೆದುಕೊಳ್ಳಲು ಇಂದು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಮುಗಿಬಿದ್ದ ಘಟನೆ ಪಾವಗಡ ಪಟ್ಟಣದ ಪತಂಜಲಿ ನಗರದಲ್ಲಿನ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ನಡೆಯಿತು. ಕಾರ್ಮಿಕ ಇಲಾಖೆಯಿಂದ ಕೊಡಮಾಡುವ ಎಜುಕೇಶನ್ ಕಿಟ್​ಗಾಗಿ ಟೋಕನ್ ವಿತರಿಸಲು ಕಾರ್ಮಿಕ ಇಲಾಖೆ ಮುಂದಾಗಿತ್ತು. ಪಾವಗಡ ತಾಲ್ಲೂಕಿನಲ್ಲಿ ಒಟ್ಟು 8 ಸಾವಿರ ನೋಂದಾಯಿತ ಕಾರ್ಮಿಕರಿದ್ದಾರೆ. ಈ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ಕಿಟ್ ಕೊಡಲಾಗುತ್ತಿದೆ.

ಕಿಟ್ ಪಡೆಯಲು ವಿದ್ಯಾರ್ಥಿಗಳಿಂದ ನೂಕು ನುಗ್ಗಲು

ಇದನ್ನೂ ಓದಿ..ಸಿದ್ಧಗಂಗಾ ಮಠಕ್ಕೆ ಭೇಟಿ: ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ಸಚಿವ ಪರಮೇಶ್ವರ್

ಕೇವಲ ಎರಡು ನೂರು ಕಿಟ್​.. ಕೇವಲ 200 ಕಿಟ್ ಮಾತ್ರ ವಿತರಿಸಲು ಕಾರ್ಮಿಕ ಇಲಾಖೆ ಮುಂದಾಗಿದೆ. ಈ ವೇಳೆ ಕಿಟ್​ಗಾಗಿ ಸಾವಿರಾರು ವಿದ್ಯಾರ್ಥಿಗಳ ಪೋಷಕರು ಮುಗಿಬಿದ್ದಿದ್ದರು. ಈ ವೇಳೆ ಪರಸ್ಪರ ನೂಕಾಟ ತಳ್ಳಾಟ ನಡೆಯಿತು. ಪೊಲೀಸರ ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಶಿಗ್ಗಾಂವಿಯಲ್ಲಿ ಅಪಘಾತ: ರಾಷ್ಟ್ರೀಯ ಹೆದ್ದಾರಿ 48 ದಾಟುತ್ತಿದ್ದ ವೇಳೆ ಅಪರಿಚಿತ ಕಾರೊಂದು ಅತಿ ವೇಗವಾಗಿ ಬಂದಿದ್ದಲ್ಲದೇ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಪ್ರವಾಸಿ ಮಂದಿರದ ಬಳಿ ಮಂಗಳವಾರ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ರತ್ನವ್ವ ಸಂಶಿ ಎಂಬುವರು ತೂರಿಕೊಂಡು ಬಿದ್ದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾಂಗ್ರೆಸ್​ ಕಾರ್ಯಕರ್ತನ ಬರ್ಬರ ಹತ್ಯೆ

Last Updated : May 25, 2023, 3:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.