ತುಮಕೂರು : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ ದಿನಗೂಲಿ ನೌಕರನನ್ನು ಅಪರಾಧಿ ಎಂದು ತೀರ್ಪು ನೀಡಿರುವ ತುಮಕೂರು ಜಿಲ್ಲಾ ವಿಶೇಷ ನ್ಯಾಯಾಲಯ ಆತನಿಗೆ ಕಠಿಣ ಶಿಕ್ಷೆ ವಿಧಿಸಿದೆ. 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
9 ವರ್ಷದ ಬಾಲಕಿಯ ಮೇಲೆ 2019ರಲ್ಲಿ ಕೀಚಕ ಅಮಾನುಷವಾಗಿ ಅತ್ಯಾಚಾರ ನಡೆಸಿದ್ದ. ಈತನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ಇಂತಹ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂಬ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿಗೆ ಕಡಿಮೆ ಅವಧಿಯಲ್ಲಿಯೇ ವಿಚಾರಣೆ ನಡೆಸಿ ಅಪರಾಧಿ ಎಂದು ತೀರ್ಪು ನೀಡಿದ್ದಲ್ಲದೇ ಶಿಕ್ಷೆಯನ್ನೂ ಪ್ರಕಟಿಸಿದೆ.