ತುಮಕೂರು: ಕೆರೆಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತೋವಿನಕೆರೆ ತಾಲೂಕಿನ ಸಾರಿಗೆಹಳ್ಳಿ ಕೆರೆಯಲ್ಲಿ ನಡೆದಿದೆ.
ತೋವಿನಕೆರೆ ನಿವಾಸಿ ಚಂದ್ರು (25) ಮೃತ ಯುವಕ. ಈತ ಕಡಬ ಪೆಟ್ರೋಲ್ ಬಂಕ್ವೊಂದರಲ್ಲಿ ಕೆಲಸ ಮಾಡುತಿದ್ದ. ಇಂದು ಬೆಳಿಗ್ಗೆ ಮೂವರು ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ತೆರಳಿದ್ದ ಚಂದ್ರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ಕುರಿತು ದಂಡಿನ ಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.