ತುಮಕೂರು: ನಗರ ಪ್ರದೇಶಗಳಲ್ಲಿ ಆಮ್ ಆದ್ಮಿ ಪಕ್ಷ ತನ್ನ ಅಸ್ತಿತ್ವವನ್ನು ಭದ್ರಪಡಿಸಿಕೊಳ್ಳಲು ಯತ್ನಿಸುತ್ತಿದೆ. ಇದೀಗ ಗ್ರಾಮೀಣ ಮಟ್ಟದಲ್ಲಿಯೂ ಪಕ್ಷ ಸಂಘಟನೆಗೆ ಗಂಭೀರ ಚಿಂತನೆ ನಡೆಸುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲು ಜಿಲ್ಲೆಯಲ್ಲಿ ಸಿದ್ಧತೆ ನಡೆಸಿದೆ.
ಈಗಾಗಲೇ ಆರು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಗ್ರಾಮೀಣ ಮಟ್ಟದಲ್ಲಿ ಕೆಲಸ ಆರಂಭಿಸಿದೆ.
ಓದಿ: ಪೊಲೀಸ್ ಠಾಣೆಗೆ ಬರುವವರ ಜೊತೆ ಗೌರವಯುತವಾಗಿ ವರ್ತಿಸಿ: ಸಿಎಂ ಸೂಚನೆ
ಇದಕ್ಕಾಗಿ ಈಗಾಗಲೇ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಮುಂದಾಗಿರುವ ಪಕ್ಷವು ಮಿಸ್ ಕಾಲ್ ಯೋಜನೆ ಮೂಲಕ ಕಾರ್ಯಕರ್ತರನ್ನು ಹೆಚ್ಚಿಸಲು ಮುಂದಾಗಿದೆ. ಜಿಲ್ಲೆಯ ಎಲ್ಲ ಜಿಲ್ಲಾಪಂಚಾಯಿತಿ ಕ್ಷೇತ್ರಗಳಲ್ಲಿ ಅಧಿಕೃತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿರುವುದಾಗಿ ಪಕ್ಷದ ಮುಖಂಡರು ತಿಳಿಸಿದ್ದಾರೆ.