ತುಮಕೂರು: ಆದಾಯ ಮೀರಿ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಇಂದು ಎಸಿಬಿ ಅಧಿಕಾರಿಗಳು ಒಂಭತ್ತು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಅದರಲ್ಲಿ ಬೆಂಗಳೂರಿನ ಕೋರಮಂಗಲದಲ್ಲಿ ಹಿರಿಯ ಮೋಟಾರ್ ವೆಹಿಕಲ್ ಇನ್ಸ್‌ಪೆಕ್ಟರ್ ಆಗಿರುವ ಕೃಷ್ಣಮೂರ್ತಿ ಅವರಿಗೆ ಸಂಬಂಧಿಸಿದ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ದೇವರಹಳ್ಳಿ ಬಳಿ ಇರುವ ಫಾರಂಹೌಸ್ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.
ಸುಮಾರು ಹತ್ತಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದೆ. ಫಾರಂ ಹೌಸ್‌ನಲ್ಲಿ ಐಷಾರಾಮಿ ಕಟ್ಟಡವೊಂದನ್ನು ಕಟ್ಟಲಾಗುತ್ತಿದ್ದು, ಅಲ್ಲಿ ಕೆಲವು ದಾಖಲೆ ಪತ್ರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಇಂದು ಬೆಳಗ್ಗೆ ಕೊರಟಗೆರೆ ತಾಲೂಕು ಚೆನ್ನರಾಯನದುರ್ಗ ಹೋಬಳಿ ದೇವರಹಳ್ಳಿಯ ಅವರ ಎಸ್ಟೇಟ್ನಲ್ಲಿ ಮತ್ತು ಬೆಂಗಳೂರು ಮನೆ ಮೇಲೆ ಮೇಲೆ ದಾಳಿ ನಡೆಸಲಾಗುತ್ತು.