ETV Bharat / state

ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ದಾಳಿ: ಗ್ರಾಮ ಲೆಕ್ಕಾಧಿಕಾರಿ, ಗ್ರಾಮ ಸಹಾಯಕ ವಶಕ್ಕೆ - ತುಮಕೂರಿನ ಹೆಗ್ಗೆರೆ ಗ್ರಾಮದಲ್ಲಿ ಘಟನೆ

ತುಮಕೂರು ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ರೈತನೊಬ್ಬನಿಂದ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ದಾಳಿ ನಡೆಸಿ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದೆ.

ACB raids and take two officers in custody
ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ದಾಳಿ
author img

By

Published : Sep 30, 2021, 9:23 AM IST

Updated : Oct 2, 2021, 2:19 PM IST

ತುಮಕೂರು: ರೈತರೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಲೆಕ್ಕಾಧಿಕಾರಿ ಹಾಗೂ ಗ್ರಾಮ ಸಹಾಯಕ ಎಸಿಬಿ ಬಲೆಗೆ ಬಿದ್ದಿರುವ ಘಟನೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮ ಲೆಕ್ಕಾಧಿಕಾರಿ ರಶ್ಮಿ ಹಾಗೂ ಗ್ರಾಮ ಸಹಾಯಕರ ಪ್ರಕಾಶ್ ಎಂಬುವವರನ್ನು ಎಸಿಬಿ ವಶಕ್ಕೆ ಪಡೆದಿದೆ.

ಭೀಮಸಂದ್ರದ ರೈತನೋರ್ವ ತಮ್ಮ ಜಮೀನು ಖಾತೆ ಮತ್ತು ಪಹಣಿ ವರ್ಗಾವಣೆ ಮಾಡಿ ಕೊಡುವ ವಿಚಾರವಾಗಿ ಹೆಗ್ಗೆರೆ ಗ್ರಾಮ ಲೆಕ್ಕಾಧಿಕಾರಿಗೆ ಅರ್ಜಿ ಸಲ್ಲಿಸಿದ್ದರು. ಕೆಲಸ ಮಾಡಿ ಕೊಡಲು ಇಬ್ಬರು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಅದರಂತೆ ತಹಶೀಲ್ದಾರ್​ ಕಚೇರಿಯ ಕೆಳಭಾಗದಲ್ಲಿರುವ ಸಕಬಾ ಹೋಬಳಿ ಕಂದಾಯ ನಿರೀಕ್ಷಕರ ಕಚೇರಿ ಬಳಿ ವ್ಯಕ್ತಿಯಿಂದ 8 ಸಾವಿರ ರೂ.ಗಳನ್ನು ಪಡೆಯುತ್ತಿದ್ದರು. ಈ ವೇಳೆ, ಎಸಿಬಿ ಡಿವೈಎಸ್ಪಿ ಮಲ್ಲಿಕಾರ್ಜುನ ನೇತೃತ್ವದ ತಂಡ ದಾಳಿ ನಡೆಸಿ ಅಧಿಕಾರಿಗಳನ್ನು ವಶಕ್ಕೆ ಪಡೆದಿದೆ.

ಇದನ್ನೂ ಓದಿ: ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ರೇಣುಕಾಚಾರ್ಯ, ಜೀವರಾಜ್ ನೇಮಕ

Last Updated : Oct 2, 2021, 2:19 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.