ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ದೊಡ್ಡಬಿದರೆ ಗ್ರಾಮದಲ್ಲಿ ಆಕಸ್ಮಿಕ ಬೆಂಕಿಯಿಂದ ಮನೆಯೊಂದು ಹೊತ್ತಿ ಉರಿದ ಘಟನೆ ನಡೆದಿದೆ.
ಹುಳಿಯಾರು ಹೋಬಳಿ ದೊಡ್ಡಬಿದರೆ ಗ್ರಾಮದಲ್ಲಿನ ಮನೆಯ ಸೀಮೆ ಎಣ್ಣೆ ಬುಟ್ಟಿ ಬಿದ್ದು ಬೆಂಕಿ ಹತ್ತಿಕೊಂಡಿದೆ. ಅದೃಷ್ಟವಶಾತ್ ಮನೆಯಲ್ಲಿ ಇದ್ದವರೆಲ್ಲರೂ ಹೊರ ಓಡಿ ಬಂದಿದ್ದಾರೆ. ಇನ್ನು ಯಾವುದೇ ರೀತಿಯ ಸಾವು-ನೋವು ಸಂಭವಿಸಿಲ್ಲ.
ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.