ETV Bharat / state

ಅನಗತ್ಯವಾಗಿ ಆಕ್ಸಿಜನ್ ನೀಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ಆರೋಗ್ಯ ಇಲಾಖೆ ಎಚ್ಚರಿಕೆ

ತುಮಕೂರು ಜಿಲ್ಲೆಯಲ್ಲಿ ಅನಗತ್ಯವಾಗಿ ಆಕ್ಸಿಜನ್ ನೀಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ.

Action against private hospitals that provide unnecessary oxygen
ಆರೋಗ್ಯ ಇಲಾಖೆ ಎಚ್ಚರಿಕೆ
author img

By

Published : Apr 27, 2021, 12:28 PM IST

ತುಮಕೂರು: ಜಿಲ್ಲೆಯಲ್ಲಿ ಅಗತ್ಯವಿರುವ ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಸಂಗ್ರಹವಿದೆ. ಆದ್ರೆ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಅನಗತ್ಯವಾಗಿ ಆಕ್ಸಿಜನ್ ನೀಡುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಇದನ್ನು ಸರಿಪಡಿಸಿಕೊಳ್ಳದಿದ್ದರೆ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ.

ಆರೋಗ್ಯ ಇಲಾಖೆ ಎಚ್ಚರಿಕೆ

ಈಟಿವಿ ಭಾರತದ ಜೊತೆ ಮಾತನಾಡಿದ ಅವರು, 300ರಿಂದ 400 ಜನ ಸೋಂಕಿತರಿಗೆ ರೆಮ್​ಡೆಸಿವಿರ್ ನೀಡುವ ಪರಿಸ್ಥಿತಿ ನಿರ್ಮಾಣವಾಗಬಹುದು. ಖಾಸಗಿ ಮತ್ತು ಸರ್ಕಾರಿ ವಲಯದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ನೀಡಲು ಪೂರಕವಾಗಿ ಸರ್ಕಾರದಿಂದ ಸರಬರಾಜು ಆಗಿದೆ. ಆದ್ರೆ ಅನಗತ್ಯವಾಗಿ ರೆಮ್​ಡೆಸಿವರ್ ನೀಡಲು ಖಾಸಗಿ ಆಸ್ಪತ್ರೆಗಳು ಆರಂಭಿಸಿದರೆ ಅಭಾವ ಸೃಷ್ಟಿಯಾಗಲಿದೆ. ಅದನ್ನು ಅನಗತ್ಯವಾಗಿ ಉಪಯೋಗಿಸಬಾರದು ಎಂದು ಹೇಳಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.