ETV Bharat / state

ತುಮಕೂರು: ಕುಡಿಯುವ ನೀರಿನ ಅಭಾವ ಉಂಟಾಗದಂತೆ ಕ್ರಮ - drinking water source

ಹಾಸನದ ಗೊರೂರಿನ ಹೇಮಾವತಿ ಜಲಾಶಯದಿಂದ ಚಾನೆಲ್​ಗಳ ಮೂಲಕ ತುಮಕೂರು ಜಿಲ್ಲೆಯ ಬಹುತೇಕ ಕೆರೆ-ಕಟ್ಟೆಗಳಿಗೆ ನಿರೀಕ್ಷೆಯಂತೆ ನೀರು ಹರಿಸಲಾಗಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಈಗಾಗಲೇ ಬೇಕಾದಷ್ಟು ನೀರನ್ನು ಸಂಗ್ರಹಿಸಿಟ್ಟುಕೊಳ್ಳಲಾಗಿದೆ.

Action to prevent drinking water problem in Tumkur
ತುಮಕೂರಿನಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಕ್ರಮ
author img

By

Published : Apr 2, 2021, 8:04 PM IST

ತುಮಕೂರು: ಬೇಸಿಗೆ ಬಂತೆಂದರೆ ಹೆಚ್ಚಿನ ಕಡೆಗಳಲ್ಲಿ ನೀರಿನ ಸಮಸ್ಯೆ ಉದ್ಭವಿಸುತ್ತದೆ. ಕುಡಿಯುವ ನೀರಿಗಾಗಿ ಮೊದಲೇ ಮುಂಜಾಗ್ರತಾ ಕ್ರಮ ಕೈಗೊಂಡು ಶೇಖರಣೆ ಮಾಡಬೇಕಾಗುತ್ತದೆ. ಕಳೆದ ವರ್ಷ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ತುಮಕೂರು ನಗರಕ್ಕೆ ಈ ಬಾರಿ ಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗುವುದಿಲ್ಲ.

ಸಾಮಾನ್ಯವಾಗಿ ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಮಿತಿ ಮೀರಿರುತ್ತದೆ. ಮುಖ್ಯವಾಗಿ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ನಿಭಾಯಿಸಲು ಹಾಸನದ ಗೊರೂರಿನ ಹೇಮಾವತಿ ಜಲಾಶಯವನ್ನು ಆಶ್ರಯಿಸಬೇಕಾಗಿದೆ.

ಕುಡಿಯುವ ನೀರಿನ ಅಭಾವ ಉಂಟಾಗದಂತೆ ಕ್ರಮ

ಕಳೆದ ವರ್ಷ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಿದ್ದು, ಹೇಮಾವತಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬಂದಿತ್ತು. ಹೀಗಾಗಿ ಹಾಸನದ ಗೊರೂರಿನ ಹೇಮಾವತಿ ಜಲಾಶಯದಿಂದ ಕಾಲುವೆಗಳ ಮೂಲಕ ತುಮಕೂರು ಜಿಲ್ಲೆಯ ಬಹುತೇಕ ಕೆರೆ-ಕಟ್ಟೆಗಳಿಗೆ ನಿರೀಕ್ಷೆಯಂತೆ ನೀರು ಹರಿಸಲಾಯಿತು. ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಈಗಾಗಲೇ ಬೇಕಾದಷ್ಟು ನೀರನ್ನು ಸಂಗ್ರಹಿಸಿಟ್ಟುಕೊಳ್ಳಲಾಗಿದೆ.

ನಗರದ ಮಧ್ಯಭಾಗದಲ್ಲಿರುವ ಅಮಾನಿ ಕೆರೆಗೂ ಕೂಡ ನೀರನ್ನು ಹರಿಸಿಕೊಳ್ಳಲಾಗಿದೆ. ನಗರದ ಸುತ್ತಮುತ್ತಲಿರುವ ಬೋರ್​ವೆಲ್​ಗಳಲ್ಲಿ ಅಂತರ್ಜಲ ಮಟ್ಟ ಈ ಬಾರಿ ಉತ್ತಮ ಪ್ರಮಾಣದಲ್ಲಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಿಕೊಳ್ಳಲು ಅಂತರ್ಜಲ ಮಟ್ಟ ಸಾಕಷ್ಟು ಸಹಕಾರಿಯಾಗಲಿದೆ. ಇದರಿಂದಾಗಿ ತುಮಕೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ.

ಹಾಸನದ ಗೊರೂರಿನ ಹೇಮಾವತಿ ಜಲಾಶಯದಿಂದ ತುಮಕೂರು ನಗರದ ಹೆಬ್ಬಾಕ ಕೆರೆ ಮತ್ತು ಬುಗುಡನಹಳ್ಳಿ ಕೆರೆಗೆ ಈಗಾಗಲೇ ನೀರು ಹರಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಬೆಣ್ಣೆ ನಗರಿಯಲ್ಲಿ ಹುಲ್ಲಿನ ಬಣವೆಗಳು ಬೆಂಕಿಗಾಹುತಿಯಾದ ಪ್ರಕರಣಗಳೇ ಹೆಚ್ಚು!

50 ಎಂಎಲ್​ಡಿ ಯಷ್ಟು ನೀರು ತುಮಕೂರು ನಗರಕ್ಕೆ ಅಗತ್ಯವಿದೆ. ನಗರದಲ್ಲಿ 700 ಬೋರ್​​ ವೆಲ್​​​ಗಳಿವೆ. ಅಮೇರಿಕೆಯಲ್ಲಿ ಈಗಾಗಲೇ ಹೇಮಾವತಿ ನದಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲಾಗಿದೆ. ನೀರಿನ ಕೊರತೆ ಎದುರಾದರೂ ಅದನ್ನು ಬಳಸಿಕೊಳ್ಳುವ ಯೋಜನೆ ರೂಪಿಸಲಾಗಿದೆ. ಅಲ್ಲದೇ ಗಂಗಸಂದ್ರ ಕೆರೆಯಲ್ಲಿಯೂ ಕೂಡ ನೀರನ್ನು ಸಂಗ್ರಹಿಸಿಟ್ಟು ಕೊಳ್ಳಲಾಗಿದೆ.

ಹೀಗಾಗಿ ಈ ಬಾರಿಯ ಬೇಸಿಗೆಯಲ್ಲಿ ತುಮಕೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವುದಿಲ್ಲ. ಹಿಂದಿನ ಅನೇಕ ವರ್ಷಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದರು. ಆದರೆ ಈ ಬಾರಿ ಅಂತಹ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ ಎಂಬ ವಿಶ್ವಾಸವನ್ನು ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.