ತುಮಕೂರು: ಹೊಯ್ಸಳ ವಾಹನದ ನಾಲ್ವರು ಪೊಲೀಸ್ ಸಿಬ್ಬಂದಿ ಮದ್ಯ ಸೇವಿಸಿದ್ದಾರೆಂದು ಆರೋಪಿಸಿ ಸಾರ್ವಜನಿಕರು ರಸ್ತೆಯಲ್ಲಿಯೇ ಅವರನ್ನು ಅಡ್ಡಗಟ್ಟಿ ಪ್ರಶ್ನಿಸಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ ಎನ್ನಲಾಗ್ತಿದೆ.
ಕುಣಿಗಲ್ ಹಾಗೂ ಮದ್ದೂರು ಮಾರ್ಗದಲ್ಲಿ ಹೊಯ್ಸಳ ವಾಹನ ಪೊಲೀಸ್ ಸಿಬ್ಬಂದಿ ಮದ್ಯ ಸೇವಿಸಿರುವುದನ್ನು ಗಮನಿಸಿದ ಸಾರ್ವಜನಿಕರು ಅವರನ್ನು ಪ್ರಶ್ನೆ ಮಾಡಿದ್ದಾರೆ. ತಕ್ಷಣ ಅಲ್ಲಿಂದ ವಾಹನ ಸಮೇತ ಕುಣಿಗಲ್ ಪಟ್ಟಣಕ್ಕೆ ಹೋದ ಪೊಲೀಸರನ್ನು ಬೆಂಬಿಡದೆ ಹಿಂಬಾಲಿಸಿದ್ದಾರೆ.
ಈ ಘಟನೆಯನ್ನು ಮೊಬೈಲ್ ನಲ್ಲಿ ವಿಡಿಯೋ ರೆಕಾರ್ಡ್ ಮಾಡಿ ಹರಿಬಿಟ್ಟಿದ್ದು, ಇದು ಚರ್ಚೆಗೆ ಗ್ರಾಸವಾಗಿದೆ.