ತುಮಕೂರು: ವಿಧಾನಸಭೆ ಕಲಾಪಗಳಲ್ಲಿ ಮಾಧ್ಯಮಗಳ ಮೇಲೆ ಹೇರಿರುವ ನಿರ್ಬಂಧ ಖಂಡಿಸಿ ಕರ್ನಾಟಕ ಸ್ಟೇಟ್ ಜರ್ನಲಿಸ್ಟ್ ಯೂನಿಯನ್ ಮತ್ತು ಪತ್ರಕರ್ತರ ಸಂಘದ ವತಿಯಿಂದ ತಹಶೀಲ್ದರ್ ಕಚೇರಿಗೆ ಮುತ್ತಿಗೆ ಹಾಕಿ ಮನವಿ ಪತ್ರ ಸಲ್ಲಿಸಲಾಯಿತು.
ಐಜೆಯು ತಾಲೂಕು ಘಟಕದ ಅಧ್ಯಕ್ಷ ರಾಮಪುರಂ ನಾಗೇಶ್ ಮಾತನಾಡಿ, ಈ ಹಿಂದೆ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದ ಹಲವು ಶಾಸಕರು ವಿಧಾನಸಭೆಯಲ್ಲಿ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ್ದು ಮಾಧ್ಯಮಗಳಲ್ಲಿ ಬಂದಿದೆ. ಬಹುಮತ ಸಾಬೀತು ವೇಳೆ ವಿಧಾನಸಭೆಯಲ್ಲಿ ನಡೆದ ಹಲವು ಘಟನೆಗಳನ್ನು ಸವಿಸ್ತಾರವಾಗಿ ಪ್ರಸಾರ ಮಾಡಿದ್ದನ್ನು ಮನಗಂಡು 2ನೇ ಬಾರಿಗೆ ಆಧಿಕಾರಕ್ಕೆ ಬಂದ ಕೂಡಲೇ ಸ್ಪೀಕರ್ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವುದು ಖಂಡನೀಯ. ಕೂಡಲೇ ಹಿಂಪಡೆಯದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಇದೇ ವೇಳೆ ತಹಶೀಲ್ದಾರರ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು.