ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜ್ ಪರ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರೋಡ್ ಶೋ ನಡೆಸಿ ಕೊನೆಯ ಹಂತದ ಮತಬೇಟೆ ನಡೆಸಿದರು.
ನಗರ ಟೌನ್‌ಹಾಲ್ ಸರ್ಕಲ್‌ನಿಂದ ಆರಂಭಗೊಂಡ ರೋಡ್ ಶೋ ಎಂಜಿ ರಸ್ತೆ ಮೂಲಕ ಗುಮಾಚಿ ಸರ್ಕಲ್‌ವರೆಗೂ ಸಾಗಿತು. ಈ ವೇಳೆ ಸಾವಿರಾರು ಕಾರ್ಯಕರ್ತರು ಭಾಗವಹಿಸಿದರು.
ಈ ವೇಳೆ ಬಿಜೆಪಿ ಅಭ್ಯರ್ಥಿ ಜಿ. ಎಸ್ ಬಸವರಾಜ್, ಮಾಜಿ ಸಚಿವರಾದ ಸೊಗಡು ಶಿವಣ್ಣ ಹಾಗು ಮಾಜಿ ಶಾಸಕ ಸುರೇಶ್ ಗೌಡ ಮತ್ತಿತರರು ಹಾಜರಿದ್ದರು.