ETV Bharat / state

ಸಿದ್ದಗಂಗಾ ಮಠಕ್ಕೆ ನಾಳೆ ಅಮಿತ್​ ಶಾ ಭೇಟಿ.. ಇಂದು ಕಾರ್ಯಕ್ರಮ ಪೂರ್ವ ಸಿದ್ಧತೆ ಪರಿಶೀಲಿಸಿದ ಸಿಎಂ

author img

By

Published : Mar 31, 2022, 4:37 PM IST

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಏ.1ರಂದು ಶಿವಕುಮಾರ ಸ್ವಾಮೀಜಿ ಅವರ 115ನೇ ಜನ್ಮ ಜಯಂತಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಹ ಆಗಮಿಸಲಿದ್ದಾರೆ. ಈ ಹಿನ್ನೆಲೆ ಇಂದು ಸಿಎಂ ಮಠಕ್ಕೆ ಭೇಟಿ ನೀಡಿ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲಿಸಿದರು.

Amit Shah visits Siddaganga Math April.1
ಕಾರ್ಯಕ್ರಮ ಪೂರ್ವ ಸಿದ್ಧತೆ ಪರಿಶೀಲಿಸಿದ ಸಿಎಂ

ತುಮಕೂರು: ಶುಕ್ರವಾರ(ನಾಳೆ) ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಕಾರ್ಯಕ್ರಮ ಜರುಗಲಿದೆ. ಇದಕ್ಕೆ ಪೂರಕವಾಗಿ ಸಕಲ ವ್ಯವಸ್ಥೆಯನ್ನು ಮಠದ ಆವರಣದಲ್ಲಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಠಕ್ಕೆ ಭೇಟಿ ನೀಡಿ, ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.

ಕಾರ್ಯಕ್ರಮ ಪೂರ್ವ ಸಿದ್ಧತೆ ಪರಿಶೀಲಿಸಿದ ಸಿಎಂ

ಮಠಕ್ಕೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸ್ವಾಗತಕ್ಕೆ ಸರ್ವತಯಾರಿ ಮಾಡಿಕೊಳ್ಳಲಾಗಿದೆ. ಕೆಲವರು ಉದ್ದೇಶಪೂರ್ವಕವಾಗಿ ಸಂಘಟನೆಗೆ ಕೆಟ್ಟ ಹೆಸರು ತರುವ ದೃಷ್ಟಿಯಿಂದ ಬೆಂಗಳೂರಿನಲ್ಲಿ ಫುಟ್ ಪಾತ್​ ಮೇಲೆ ವ್ಯಾಪಾರ ಮಾಡುತ್ತಿರುವ ಒಂದು ಕೋಮಿನ ಜನರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ಇದನ್ನು ಕಾನೂನು ಮೂಲಕ ಹತ್ತಿಕ್ಕಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಶ್ರೀಶೈಲದಲ್ಲಿ ಕನ್ನಡಿಗರು -ಸ್ಥಳೀಯರ ನಡುವೆ ಘರ್ಷಣೆ: ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಸಿಎಂ

ನಮ್ಮ ಸರ್ಕಾರ ಪ್ರತಿಯೊಂದು ವಿಷಯವನ್ನು ದಕ್ಷತೆಯಿಂದ ಸಾಮರಸ್ಯ ಕದಡದಂತೆ ನಿಭಾಯಿಸಿದೆ. ಕೇಂದ್ರ ಗೃಹ ಸಚಿವರು ಆಗಮಿಸುತ್ತಿರುವ ಹಿನ್ನೆಲೆ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ಬಂದಿದೆ. ಕಾರ್ಯಕ್ರಮ ಪೂರ್ವ ಸಿದ್ಧತೆ ಪರಿಶೀಲಿಸಿದ್ದೇನೆ. ಒಳ್ಳೆಯ ಸಂದೇಶ ಈ ಕಾರ್ಯಕ್ರಮದ ಮೂಲಕ ಹೋಗಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.