ETV Bharat / state

'ಕೊರೊನಾದಿಂದ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಗೆ ಪರಿಹಾರ ನೀಡಿ'

ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್​ಗಳಾಗಿ ಕೆಲಸ ಮಾಡುತ್ತಿದ್ದ 35 ಮಂದಿ ಅಂಗನವಾಡಿ ನೌಕರರಿಗೆ ಸೋಂಕು ತಗುಲಿತ್ತು. ಬೆಳದರ ಗ್ರಾಮದ ರಾಜಮ್ಮ ಎಂಬುವವರು ಸೋಂಕಿನಿಂದ ಮೃತಪಟ್ಟಿದ್ದರು. ಆದರೆ ಅವರಿಗೆ ಸರ್ಕಾರದಿಂದ ಯಾವುದೇ ರೀತಿಯ ಪರಿಹಾರ ದೊರೆತಿಲ್ಲ ಎಂದು ಅಂಗನವಾಡಿ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದರು.

protest
protest
author img

By

Published : Mar 15, 2021, 3:57 PM IST

ತುಮಕೂರು: ಕೊರೊನಾ ಸೋಂಕು ಹರಡುತ್ತಿದ್ದ ವೇಳೆ ಮುಂಚೂಣಿ ಕಾರ್ಯಕರ್ತೆಯಾಗಿ ಕೆಲಸಮಾಡಿದ್ದ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಸೋಂಕು ತಗುಲಿ ಮೃತಪಟ್ಟಿದ್ದು, ಅವರಿಗೆ ಯಾವುದೇ ರೀತಿಯ ಪರಿಹಾರ ನೀಡಿಲ್ಲ. ಅಲ್ಲದೆ ಈ ಸಮಯದಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 50 ಮಂದಿ ಅಂಗನವಾಡಿ ನೌಕರರಿಗೆ ಸರ್ಕಾರ ನೀಡಿದ ಭರವಸೆಯಂತೆ ಪರಿಹಾರ, ಸೌಲಭ್ಯಗಳನ್ನು ನೀಡಿಲ್ಲ ಎಂದು ಆರೋಪಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ತುಮಕೂರು ತಾಲೂಕು ವ್ಯಾಪ್ತಿಯಲ್ಲಿ 15 ಮಂದಿ ಅಂಗನವಾಡಿ ಕಾರ್ಯಕರ್ತರಿಗೆ ಸೋಂಕು ತಗುಲಿತ್ತು. ಅದರಲ್ಲಿ ಬೆಳದರ ಗ್ರಾಮದ ರಾಜಮ್ಮ ಎಂಬುವವರು ಸೋಂಕಿನಿಂದ ಮೃತಪಟ್ಟಿದ್ದರು. ಆದರೆ ಅವರಿಗೆ ಸರ್ಕಾರದಿಂದ ಯಾವುದೇ ರೀತಿಯ ಪರಿಹಾರ ದೊರೆತಿಲ್ಲ ಎಂದು ಸರ್ಕಾರದ ನಡೆಯನ್ನು ಖಂಡಿಸಿದರು.

anganavadi-workers-outraged-as-compensation-not-given
ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್​ಗಳಾಗಿ ಕೆಲಸ ಮಾಡುತ್ತಿದ್ದ 35 ಮಂದಿ ಅಂಗನವಾಡಿ ನೌಕರರಿಗೆ ಸೋಂಕು ತಗುಲಿತ್ತು. ಅವರೆಲ್ಲರೂ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರೂ, ಬೇರೆ ರೀತಿಯ ಕಾಯಿಲೆಯಿಂದ ಬಳಲುವಂತಾಗಿದೆ ಎಂದರು.

ಕೊರೊನಾ ಸೋಂಕು ತಗಲುವ ಭೀತಿಯಿಂದ ನೆರೆ ಜಿಲ್ಲೆಗಳು ಹಾಗೂ ನೆರೆ ರಾಜ್ಯಗಳಿಂದ ವಾಪಸ್ಸು ತಮ್ಮ ಗ್ರಾಮಗಳಿಗೆ ಬಂದಿದ್ದ ಸಾರ್ವಜನಿಕರ ಮಾಹಿತಿ ಕಲೆಹಾಕುವುದು ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಿರೀಕ್ಷೆಗೂ ಮೀರಿ ಕೆಲಸ ಮಾಡಿದ್ದಾರೆ. ಸರ್ಕಾರ ನೀಡಿದ್ದ ಭರವಸೆಯಂತೆ ಇದುವರೆಗೂ ಪರಿಹಾರ ನೀಡಿಲ್ಲ ಎಂದು ಅಂಗನವಾಡಿ ಕಾರ್ಯಕರ್ತರು ಆರೋಪಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.