ತುಮಕೂರು: ಸಾಮಾಜಿಕ ಜಾಲತಾಣದಲ್ಲಿ ದೇಶ ವಿರೋಧಿ ಪೋಸ್ಟ್ ಅಪ್ಲೋಡ್ ಮಾಡಿದ್ದ ಯುವಕನನ್ನು ಬಂಧಿಸುವಲ್ಲಿ ಶಿರಾ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಪ್ತಗಿರಿ ಬಡಾವಣೆಯ ಅಜಯ್ ಕುಮಾರ್ ಗಾಳಿ ಬಂಧಿತ ಆರೋಪಿ. ಜೂನ್ 21ರಂದು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ದೇಶವಿರೋಧಿ ಶಬ್ದಗಳನ್ನು ಬಳಸಿ ಅಪ್ಲೋಡ್ ಮಾಡಿದ್ದಾನೆ.
ಈ ಸಂಬಂಧ ಸಿರಾ ನಗರ ಬಿಜೆಪಿ ಅಧ್ಯಕ್ಷ ವಿಜಯರಾಜ್ ಎಂಬವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.