ತುಮಕೂರು: ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರನ್ನು ಬೇರೆ ಪಕ್ಷದವರು ಸೆಳೆಯಲು ಸಾಧ್ಯವೇ ಇಲ್ಲ. ಅಲ್ಲದೇ, ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರಿಗೆ ಅಂತಹ ಮನಸ್ಥಿತಿ ಇರುವುದಿಲ್ಲ ಎಂದು ಡಿಸಿಎಂ ಡಾ. ಅಶ್ವತ್ಥ ನಾರಾಯಣ ಹೇಳಿದ್ದಾರೆ.
ನಗರದಲ್ಲಿ ನಡೆದ ಜನಸೇವಕ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬೆಂಬಲಿತ ಸದಸ್ಯರು ಪಕ್ಷದ ಸಿದ್ಧಾಂತಕ್ಕೆ ಸಂಪೂರ್ಣವಾಗಿ ನಿಷ್ಠರಾಗಿದ್ದಾರೆ ಎಂದರು.
ರಾಜ್ಯದಲ್ಲಿ ಬೇರೆ ಪಕ್ಷದವರು ಬಿಜೆಪಿ ಬೆಂಬಲಿತ ಸದಸ್ಯರನ್ನು ಹೈಜಾಕ್ ಮಾಡುವಂತಹ ಸಾಹಸಕ್ಕೆ ಕೈ ಹಾಕುವುದಿಲ್ಲ. ಇದಕ್ಕೆ ಅವಕಾಶ ನೀಡುವುದಿಲ್ಲ ಎಂದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಮುಖ್ಯಮಂತ್ರಿಗಳಿಗೆ ಪರಮಾಧಿಕಾರವಿದೆ. ಅದು ಅವರ ವಿವೇಚನೆಗೆ ಬಿಟ್ಟಿದ್ದು ಎಂದರು.
ಓದಿ: ಸಿದ್ದರಾಮಯ್ಯ ಬಿಜೆಪಿ ವಕ್ತಾರರಾ ಅಥವಾ ಬಿಜೆಪಿ ಹೈಕಮಾಂಡ್ ನಾಯಕರಾ: ಶೆಟ್ಟರ್ ಪ್ರಶ್ನೆ