ತುಮಕೂರು: ಮೂರು ವರ್ಷಗಳ ಹಿಂದೆ ನಗರದಲ್ಲಿ 32 ವರ್ಷದ ಬುದ್ಧಿಮಾಂದ್ಯೆ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ ಎಎಸ್ಐ ಉಮೇಶಯ್ಯ ಎಂಬಾತನಿಗೆ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಹಾಗೂ 1ಲಕ್ಷ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಪೈಪ್ಲೈನ್ ಮೂಲಕ ಗ್ಯಾಸ್ ವಿತರಣೆಗೆ ಬಲವಂತ ಬೇಡ : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್
ಗ್ರಾಮಾಂತರ ಠಾಣೆಯ ಎಎಸ್ಐ ಉಮೇಶಯ್ಯ 2017ರ ಜ.15ರಂದು ರಾತ್ರಿ ಗಸ್ತಿನಲ್ಲಿದ್ದಾಗ ತುಮಕೂರು ನಗರದ ಅಂತರಸನಹಳ್ಳಿ ಸೇತುವೆ ಬಳಿ ಹೋಗುತ್ತಿದ್ದ ಬುದ್ಧಿಮಾಂದ್ಯೆಯನ್ನು ಖಾಸಗಿ ಜೀಪಿನಲ್ಲಿ ಕೂರಿಸಿಕೊಂಡು ಅತ್ಯಾಚಾರ ಎಸಗಿದ್ದನು. ಸಂತ್ರಸ್ತೆಯ ಪೋಷಕರು ಎಎಸ್ಐ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಪ್ರಕರಣದ ವಿಚಾರಣೆ ನಡೆಸಿದ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಚ್.ಎಸ್. ಮಲ್ಲಿಕಾರ್ಜುನ ಸ್ವಾಮಿ ಅವರು ಆರೋಪಿ ಉಮೇಶಯ್ಯನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆ ಆತನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ. ಅಲ್ಲದೇ ಸಂತ್ರಸ್ತೆಗೆ ಪರಿಹಾರವಾಗಿ ಒಂದು ಲಕ್ಷ ರೂ. ನೀಡುವಂತೆ ಸೂಚಿಸಿದ್ದಾರೆ.