ETV Bharat / state

ಏಷ್ಯಾ​, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಹೆಚ್​ಡಿಕೆ ಸ್ವಾಗತಿಸುವ ಬೃಹತ್​ ಹಾರಗಳು..

ಜೆಡಿಎಸ್ ಪಂಚರತ್ನ ರಥಯಾತ್ರೆ ವೇಳೆ ವಿವಿಧೆಡೆ ಹೆಚ್ ಡಿ ಕುಮಾರಸ್ವಾಮಿಗೆ ರೈತರು ಬೆಳೆದ ಬೆಳೆಯ ನಾನಾ ಬೃಹತ್ ಹಾರ ಸನ್ಮಾನಿಸಿರುವುದು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಲ್ಲಿ ಸೇರ್ಪಡೆ. ಈ ದಾಖಲೆಯನ್ನು ರೈತರು ಹಾಗೂ ಕಾರ್ಯಕರ್ತರಿಗೆ ಹೆಚ್​ಡಿಕೆ ಸಮರ್ಪಣೆ. ಬೃಹತ್ ಹಾರಗಳ ಗೌರವದ ಹೊಸ ದಾಖಲೆಗೆ ಭಾಜನರಾದ ಏಕೈಕ ಮಾಜಿ ಸಿಎಂ.

Asia Book of Records honor for former CM Kumaraswamy
ಮಾಜಿ ಸಿಎಂ ಕುಮಾರಸ್ವಾಮಿಗೆ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ
author img

By

Published : Dec 30, 2022, 1:53 PM IST

Updated : Dec 30, 2022, 8:24 PM IST

ತುಮಕೂರು: ನವೆಂಬರ್ 18ರಿಂದ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೊಸ ದಾಖಲೆಗೆ ಪಾತ್ರರಾಗಿದ್ದಾರೆ. ಹೌದು ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ ಬೃಹತ್ ಹಾರಗಳನ್ನು ಹಾಕಿ ಗೌರವಿಸಿದ ಹಿನ್ನೆಲೆ ಮಾಜಿ ಮುಖ್ಯಮಂತ್ರಿಗಳು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗೆ ಪಾತ್ರರಾಗಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿನ್ನೆ ಇಡೀ ದಿನ ಯಾತ್ರೆ ನಡೆಸಿ ಕಳೆದ ರಾತ್ರಿ ಕ್ಷೇತ್ರದ ಯಲ್ಲಾಪುರ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡಿದ್ದರು.

ಹೆಚ್​ಡಿಕೆಗೆ ಎರಡು ದಾಖಲೆ ಗೌರವ: ಆ ಗ್ರಾಮಕ್ಕೆ ಆಗಮಿಸಿದ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ತೀರ್ಪುಗಾರ ಮೋಹಿತ್ ಕುಮಾರ್ ವತ್ಸ ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ತೀರ್ಪುಗಾರರಾದ ಆರ್.ಹರೀಶ್ ಅವರು ಮಾಜಿ ಮುಖ್ಯಮಂತ್ರಿ ಅವರಿಗೆ ಎರಡೂ ದಾಖಲೆಗಳ ಪತ್ರಗಳು ಮತ್ತು ಮೆಡಲ್ ಗಳನ್ನು ಹಸ್ತಾಂತರ ಮಾಡಿದರು.

ಹೆಚ್​ಡಿಕೆಗೆ ಬೃಹತ್ ಹಾರ
ಹೆಚ್​ಡಿಕೆಗೆ ಬೃಹತ್ ಹಾರ

ಬೃಹತ್ ಹಾರಗಳ ಗೌರವಕ್ಕೆ ಭಾಜನ: ಈ ಸಂದರ್ಭದಲ್ಲಿ ಮಾತನಾಡಿದ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ತೀರ್ಪುಗಾರ ಮೋಹಿತ್ ಕುಮಾರ್ ಅವರು, ಇದೊಂದು ವಿಶೇಷವಾದ ದಾಖಲೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ರಾಜಕಾರಣಿಯೊಬ್ಬರು ಗೌರವಕ್ಕೆ ಪಾತ್ರರಾಗಿರುವುದು ಹಾಗೂ ರೈತರು ಬೆಳೆದ ಬೆಳೆಗಳನ್ನೇ ಬೃಹತ್ ಹಾರಗಳನ್ನಾಗಿ ತಯಾರಿಸಿ ಅವರಿಗೆ ಹಾಕಿ ಸ್ವಾಗತಿಸುತ್ತಿರುವುದು ಸೋಜಿಗ. ಇದು ಮೊದಲ ದಾಖಲೆ ಎಂಬ ಮಾಹಿತಿ ನೀಡಿದರು.

Asia Book, India Book of Records
ಏಷ್ಯಾ ಬುಕ್​, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್

ಸದಾ ದಾಖಲೆಗಳನ್ನು ನಾವು ಹುಡುಕುತ್ತಿರುತ್ತೇವೆ. ದೇವನಹಳ್ಳಿ ವಿಧಾನಸಭೆ ಕ್ಷೇತ್ರದ ಪಂಚರತ್ನ ರಥಯಾತ್ರೆ ಸಂದರ್ಭದಲ್ಲಿ ಕುಮಾರಸ್ವಾಮಿ ಅವರಿಗೆ ಕೃಷಿ ಬೆಳೆಗಳಿಂದ ತಯಾರಿಸಿದ ಬೃಹತ್​ ಹಾರಗಳನ್ನು ಹಾಕಿ ಬರಮಾಡಿಕೊಂಡ ಬಗ್ಗೆ ಮಾಹಿತಿ ಸಿಕ್ಕಿತ್ತು. ಅಂದಿನಿಂದ ನಾವು ಖುದ್ದು ಪರಿಶೀಲನೆ ಮಾಡುತ್ತಿದ್ದೆವು. ನಿನ್ನೆ ನಾವು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ರಥಯಾತ್ರೆಯ ಜತೆಗೆ ಪ್ರವಾಸ ಮಾಡಿದೆವು. ಬೃಹತ್ ಹಾರಗಳ ಗೌರವಕ್ಕೆ ಭಾಜನರಾಗಿರುವ ಏಕೈಕ ವ್ಯಕ್ತಿ ಕುಮಾರಸ್ವಾಮಿ ಎಂದು ಮೋಹಿತ್ ಕುಮಾರ್ ವಿವರಿಸಿದರು.

ಹೆಚ್​ಡಿಕೆಗೆ ಬೃಹತ್ ಹಾರ
ಹೆಚ್​ಡಿಕೆಗೆ ಬೃಹತ್ ಹಾರ

ರೈತರ ಕಾರ್ಯಕರ್ತರಿಗೆ ಸಮರ್ಪಿಸಿದ ಹೆಚ್ಡಿಕೆ: ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇದು ನನಗೆ ಅಚ್ಚರಿಯ ಗೌರವ. ಈ ದಾಖಲೆಗಳನ್ನು ನನ್ನ ನಾಡಿನ ರೈತರು ಹಾಗೂ ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಮರ್ಪಣೆ ಮಾಡುತ್ತೇನೆ ಎಂದು ತಿಳಿಸಿದರು. ನಾನು ರಥಯಾತ್ರೆ ಮಾಡುತ್ತಿರುವ ಎಲ್ಲ ಕಡೆಯೂ ಜನರು ನನ್ನನ್ನು ಪ್ರೀತಿಯಿಂದ ಸ್ವಾಗತ ಮಾಡುತ್ತಿದ್ದಾರೆ. ಬೃಹತ್ ಹಾರಗಳನ್ನು ಹಾಕುವುದರೊಂದಿಗೆ ದೊಡ್ಡ ಪ್ರಮಾಣದಲ್ಲಿ ಸ್ವಾಗತ ಬಯಸುತ್ತಿದ್ದಾರೆ. ಆ ಜನರ ಪ್ರೀತಿಯಿಂದ ಮಾತ್ರ ಈ ದಾಖಲೆ ಸಾಧ್ಯವಾಗಿದೆ. ಹೀಗಾಗಿ ಈ ಎಲ್ಲ ದಾಖಲೆಯ ಹೆಗ್ಗಳಿಕೆ ಅವರಿಗೇ ಸಲ್ಲಬೇಕೆಂಬ ಆಶಯ ವ್ಯಕ್ತ ಪಡಿಸಿದರು.

Asia Book of Records
ಏಷ್ಯಾ ಬುಕ್ ಆಫ್ ರೆಕಾರ್ಡ್ಸ್

ಕುಮಾರಸ್ವಾಮಿ ಸಂತಸ: ಪಂಚರತ್ನ ಯಾತ್ರೆ ಆರಂಭವಾಗಿ 33ನೇ ದಿನ ಪೂರೈಸಿದೆ. ಈ ಯಾತ್ರೆಯಲ್ಲಿ ಜನರು ಪ್ರೀತಿಯಿಂದ ಹಾಕಿದ ಹಾರಗಳು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಇಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಾಗಿರುವುದು ಸಂತಸ ಉಂಟು ಮಾಡಿದೆ ಎಂದು ತಿಳಿಸಿದರು.

ಹಾರಗಳ ಸಂಖ್ಯೆ 500:ಇನ್ನೊಂದೆಡೆ ಪಂಚರತ್ನ ಯಾತ್ರೆ ಇದೀಗ 34ನೆ ದಿನಕ್ಕೆ ಕಾಲಿಟ್ಟಿದೆ. ಹಾರಗಳ ಸಂಖ್ಯೆ 500ರ ಗಡಿ ದಾಟಿದೆ. ನಿನ್ನೆ ತುಮಕೂರು ಗ್ರಾಮಾಂತರ ಕ್ಷೇತ್ರವೊಂದರಲ್ಲೇ 30ಕ್ಕೂ ಹೆಚ್ಚು ಬೃಹತ್ ಹಾರಗಳನ್ನು ಮಾಜಿ ಮುಖ್ಯಮಂತ್ರಿ ಅವರಿಗೆ ಹಾಕಿ ಗೌರವಿಸಲಾಯಿತು. ಈ ಕ್ಷೇತ್ರದಲ್ಲಿ ಸೇಬು, ಸೌತೆಕಾಯಿ, ಕೊಬರಿ, ಕಬ್ಬಿನ ಹಾರಗಳ ಜತೆಗೆ ನಾಣ್ಯದ ಹಾರ, ಭತ್ತ ನೇಗಿಲು ಹಾರ, ಎತ್ತಿನ ಲಾಳದ ಹಾರ, ಜೆಡಿಎಸ್ ಚಿಹ್ನೆ ಹಾರ, ಮಣ್ಣಿನ ಹಾರ, ಕಿರೀಟದ ಹಾರ, ಕರ್ಜಿಕಾಯಿ ಹಾರ, ವಿವಿಧ ತರಕಾರಿಗಳ ಹಾರ, ವಿವಿಧ ಹಣ್ಣುಗಳ ಹಾರ, ಎಲ್ ಇ ಡಿ ಹಾರ ಸೇರಿದಂತೆ ಒಂದೇ ದಿನ 30ಕ್ಕೂ ಹೆಚ್ಚು ಹಾರಗಳನ್ನು ಕುಮಾರಸ್ವಾಮಿ ಅವರಿಗೆ ಹಾಕಿ ಸ್ವಾಗತ ಮಾಡಲಾಗಿತ್ತು.

ಇದನ್ನೂಓದಿ:ಮಂಡ್ಯ: ಮೆಗಾ ಹಾಲಿನ ಡೈರಿ ಉದ್ಘಾಟಿಸಿದ ಅಮಿತ್​ ಶಾ

Last Updated : Dec 30, 2022, 8:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.