ETV Bharat / state

ತುಮಕೂರು: ಕರ್ತವ್ಯನಿರತ ಸಹಾಯಕ ಸಬ್​ ಇನ್ಸ್​ಪೆಕ್ಟರ್ ಹೃದಯಾಘಾತದಿಂದ ಸಾವು - ಎಎಸ್‌ಐ ಹೃದಯಾಘಾತ

ಕರ್ತವ್ಯನಿರತ ಸಹಾಯಕ ಸಬ್​ ಇನ್ಸ್​ಪೆಕ್ಟರ್​ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

assistant-sub-inspector-died-of-heart-attack-in-tumkur
ಕರ್ತವ್ಯ ನಿರತ ಸಹಾಯಕ ಸಬ್​ ಇನ್ಸ್​ಪೆಕ್ಟರ್ ಹೃದಯಾಘಾತದಿಂದ ಸಾವು
author img

By

Published : Jul 7, 2023, 11:03 AM IST

ತುಮಕೂರು : ಕರ್ತವ್ಯನಿರತ ಎಎಸ್‌ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರಾ ಪೊಲೀಸ್ ಠಾಣೆಯಲ್ಲಿ ಇಂದು ನಡೆದಿದೆ. ಶಿರಾ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ಗಂಗಣ್ಣ (56) ಮೃತರು. ಗಂಗಣ್ಣ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಮರಣೋತ್ತರ ಪರೀಕ್ಷೆ ಕರ್ತವ್ಯದಲ್ಲಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಜೊತೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ತುಮಕೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬೆಸ್ಕಾಂ ಇಂಜಿನಿಯರ್ ಆತ್ಮಹತ್ಯೆ : ಕೌಟುಂಬಿಕ ಸಮಸ್ಯೆಯಿಂದಾಗಿ ಬೆಸ್ಕಾಂ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಪಾವಗಡದಲ್ಲಿ ನಡೆದಿದೆ. ಬೆಂಗಳೂರಿನ ಬೆಳ್ಳಂದೂರು ಬೆಸ್ಕಾಂ ಪೂರ್ವ ವಿಭಾಗದ ಜೂನಿಯರ್ ಇಂಜಿನಿಯರ್ ಮಂಜುನಾಥ್ (22) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪಾವಗಡ ಪಟ್ಟಣದ ಲಾಡ್ಜ್​​ವೊಂದರಲ್ಲಿ‌‌‌ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಮದುವೆ‌‌ ವಿಚಾರದಲ್ಲಿ ಬೇಸರಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಪಾವಗಡ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : DIG Suicide: ಗುಂಡು ಹಾರಿಸಿಕೊಂಡು ಕೊಯಮತ್ತೂರು ಡಿಐಜಿ ವಿಜಯಕುಮಾರ್ ಆತ್ಮಹತ್ಯೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.