ETV Bharat / state

ಗ್ರಾಮೀಣ ಹಾಗೂ ಜಿಲ್ಲಾ ಮಟ್ಟದಲ್ಲೂ ದಸರಾ ಕ್ರೀಡಾಕೂಟ ಆಯೋಜಿಸಲು ಆಗ್ರಹ

ರಾಜ್ಯ ಸರ್ಕಾರ ತಾಲೂಕು ಮಟ್ಟದ ಮತ್ತು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳನ್ನು ಸ್ಥಗಿತಗೊಳಿಸಿದ್ದು ಕೇವಲ ರಾಜ್ಯಮಟ್ಟಕ್ಕೆ ದಸರಾ ಕ್ರೀಡಾಕೂಟವನ್ನು ಸೀಮಿತಗೊಳಿಸಿದೆ. ಆದ್ರೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಈ ಕ್ರೀಡಾಕೂಟ ನಡೆಯಬೇಕೆಂದು ತುಮಕೂರಿನ ಕ್ರೀಡಾಪಟುಗಳು ಆಗ್ರಹಿಸಿದ್ದಾರೆ.

ದಸರಾ ಕ್ರೀಡಾಕೂಟ ಆಯೋಜಿಸಲು ಕ್ರೀಡಾಪಟುಗಳ ಆಗ್ರಹ
author img

By

Published : Aug 3, 2019, 8:08 PM IST

ತುಮಕೂರು : ಈ ಹಿಂದೆ ರಾಜ್ಯಾದ್ಯಂತ ತಾಲೂಕು ಮಟ್ಟದ ಮತ್ತು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿತ್ತು. ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆಯಾದ ಕ್ರೀಡಾಪಟುಗಳನ್ನು ರಾಜ್ಯಮಟ್ಟದಲ್ಲಿ ನಡೆಯುವಂತಹ ದಸರಾ ಕ್ರೀಡಾಕೂಟಕ್ಕೆ ಕಳುಹಿಸಿ ಕೊಡಲಾಗುತ್ತಿತ್ತು.

ದಸರಾ ಕ್ರೀಡಾಕೂಟ ಆಯೋಜಿಸಲು ಕ್ರೀಡಾಪಟುಗಳ ಆಗ್ರಹ

ಈ ಮೂಲಕ ತಾಲೂಕು ಕೇಂದ್ರಗಳಲ್ಲಿದ್ದ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ರಾಜ್ಯಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶ ಲಭಿಸುತ್ತಿತ್ತು. ಆದರೆ ಕಳೆದ ವರ್ಷದಿಂದ ದಸರಾ ಕ್ರೀಡಾಕೂಟವನ್ನು ಕೇವಲ ರಾಜ್ಯ ಮಟ್ಟಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ಏಕಾಏಕಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಿಲ್ಲದಂತಾಗಿದೆ ಎಂದು ಕ್ರೀಡಾಪಟುಗಳು ತಮ್ಮ ಅಳಲನ್ನು ತೋಡಿಕೊಂಡರು.

Intro:ದಸರಾ ಕ್ರೀಡಾಕೂಟ ಆಯೋಜಿಸಲು ಕ್ರೀಡಾಪಟುಗಳ ಆಗ್ರಹ.....

Anchor : ಎಲೆಮರೆ ಕಾಯಿಯಂತಿರುವ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳನ್ನು ಗುರುತಿಸುವ ಮತ್ತು ಅವರಿಗೆ ಉತ್ತಮ ವೇದಿಕೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ದಶಕಗಳಿಂದ ಚಾಲ್ತಿಯಲ್ಲಿದ್ದ ದಸರಾ ಕ್ರೀಡಾಕೂಟವನ್ನು ಸ್ಥಗಿತಗೊಳಿಸಿರುವ ಸರ್ಕಾರದ ನಿರ್ಧಾರಕ್ಕೆ ಕ್ರೀಡಾಪಟುಗಳು ಹಿಡಿಶಾಪ ಹಾಕುತ್ತಿದ್ದಾರೆ. ಈ ವರ್ಷವಾದರೂ ಸರ್ಕಾರ ದಸರಾ ಕ್ರೀಡಾಕೂಟವನ್ನು ಆರಂಭಿಸಬೇಕೆಂದು ಆಗ್ರಹಿಸುತ್ತಿದ್ದಾರೆ.

vo1: ರಾಜ್ಯಾದ್ಯಂತ ತಾಲೂಕು ಮಟ್ಟದ ಮತ್ತು ಜಿಲ್ಲಾಮಟ್ಟದಲ್ಲಿ ದಸರಾ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿತ್ತು. ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆಯಾದ ಕ್ರೀಡಾಪಟುಗಳನ್ನು ರಾಜ್ಯಮಟ್ಟದಲ್ಲಿ ನಡೆಯುವಂತಹ ದಸರಾ ಕ್ರೀಡಾಕೂಟಕ್ಕೆ ಕಳುಹಿಸಿ ಕೊಡಲಾಗುತ್ತಿತ್ತು. ಈ ಮೂಲಕ ತಾಲೂಕು ಕೇಂದ್ರಗಳಲ್ಲಿದ್ದ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ರಾಜ್ಯಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶ ಲಭಿಸುತ್ತಿತ್ತು. ಆದರೆ ಕಳೆದ ವರ್ಷದಿಂದ ದಸರಾ ಕ್ರೀಡಾಕೂಟವನ್ನು ಕೇವಲ ರಾಜ್ಯ ಮಟ್ಟಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ಏಕಾಏಕಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಿಲ್ಲದಂತಾಗಿದೆ.
ಬೈಟ್: ಅರುಣ್, ವಾಲಿಬಾಲ್ ಕ್ರೀಡಾಪಟು.

vo 2: 15 ವರ್ಷ ಮೇಲ್ಪಟ್ಟ ಯುವಕ-ಯುವತಿಯರು ಈ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ರು. ವಾಲಿಬಾಲ್ ಕೊಕ್ಕೋ ಕಬ್ಬಡಿ ಸೇರಿದಂತೆ ಹಲವು ಕ್ರೀಡೆಗಳನ್ನು ಆಯೋಜಿಸಲಾಗುತ್ತಿತ್ತು. ಇದರಲ್ಲಿ ಶಾಲಾ ಮಕ್ಕಳು ಹಾಗೂ ವಿವಿಧ ಕ್ರೀಡಾ ಸಂಸ್ಥೆಯ ಕ್ರೀಡಾಪಟುಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚುತ್ತಿದ್ದರು. ಪ್ರತಿ ತಾಲೂಕಿನಿಂದ ಕನಿಷ್ಠ 250 ಕ್ರೀಡಾಪಟುಗಳು ಈ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಆದರೆ ಸರ್ಕಾರ ಏಕಾಏಕಿ ತಾಲೂಕು ಮಟ್ಟ ಮತ್ತು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಗಳನ್ನು ಸ್ಥಗಿತಗೊಳಿಸಿ ಕೇವಲ ರಾಜ್ಯಮಟ್ಟದ ದಸರಾ ಕ್ರೀಡಾಕೂಟಕ್ಕೆ ಸೀಮಿತಗೊಳಿಸಿದೆ. ಈ ಬಾರಿ ಸರ್ಕಾರ ಈ ದಸರಾ ಕ್ರೀಡಾಕೂಟ ಆಯೋಜನೆ ಕುರಿತಂತೆ ಯಾವ ರೀತಿಯ ನಿರ್ಧಾರವನ್ನು ಕೈಗೊಳ್ಳಲಿದೆ ಎಂಬುದನ್ನು ನಿರೀಕ್ಷಿಸುತ್ತಿದ್ದೇವೆ ಎನ್ನುತ್ತಾರೆ
ಬೈಟ್ : ರುದ್ರಪ್ಪ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ.
vo 3 : ಒಟ್ಟಾರೆ ಇನ್ನುಮುಂದಾದರೂ ರಾಜ್ಯಸರ್ಕಾರ ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟದಲ್ಲಿ ದಸರಾ ಕ್ರೀಡಾಕೂಟವನ್ನು ಆಯೋಜಿಸುವ ಮೂಲಕ ಗ್ರಾಮೀಣ ಪ್ರತಿಭೆಗಳಿಗೆ ಉತ್ತಮವಾದ ವೇದಿಕೆಯನ್ನು ನಿರ್ಮಿಸಿಕೊಡುವಂತೆ ಗಮನಹರಿಸಲಿದೆ ಎಂಬುದನ್ನು ನಿರೀಕ್ಷಿಸಬೇಕಿದೆ.
- ಶಾಂತಿನಾಥ್ ಜೈನ್, ಈಟಿವಿ ಭಾರತ, ತುಮಕೂರು......

Body:ತುಮಕೂರು

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.