ತುಮಕೂರು: ಬಜರಂಗದಳ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ತುಮಕೂರು ನಗರದ ಗುಬ್ಬಿ ಗೇಟ್ ವೃತ್ತದಲ್ಲಿ ನಡೆದಿದೆ.
ಬಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ ಹಾಗೂ ಅವರ ಜೊತೆಯಲ್ಲಿದ್ದ ಕಿರಣ್ ಎಂಬುವವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದ್ದು, ಚಿಕಿತ್ಸೆಗಾಗಿ ತುಮಕೂರು ಜಿಲ್ಲೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಕಾರಿನಲ್ಲಿ ಬರುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮನಸೋ ಇಚ್ಛೆ ರಾಡ್ನಿಂದ ಹಲ್ಲೆ ನಡೆಸಿ, ಪರಾರಿಯಾಗಿದ್ದಾರೆ. ಈ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.