ತುಮಕೂರು: ತುರುವೇಕೆರೆ ಬಿಜೆಪಿ ಶಾಸಕ ಮಸಾಲೆ ಜಯರಾಮ್ ಅವರ ಮಗನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಹೆಬ್ಬೂರಿನಲ್ಲಿ ನಡೆದಿದೆ.
ದುಷ್ಕರ್ಮಿಗಳು ಲಾಂಗ್, ಕ್ರಿಕೆಟ್ ಬ್ಯಾಟ್ ಹಾಗೂ ಚಾಕುವಿನಿಂದ ತೇಜು ಜಯರಾಮ್ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದರಂತೆ. ಈ ವೇಳೆ ಸ್ಥಳೀಯರು ದುಷ್ಕರ್ಮಿಗಳ ಮೇಲೆ ಪ್ರತಿದಾಳಿ ನಡೆಸಿ ಅವರು ಬಂದಿದ್ದ ವಾಹನವನ್ನು ಜಖಂಗೊಳಿಸಿದ್ದಾರೆ ಎನ್ನಲಾಗುತ್ತಿದೆ.
ಘಟನೆಯಲ್ಲಿ ತೇಜು ಜಯರಾಮ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬಂದ ಹೆಬ್ಬೂರು ಪೊಲೀಸರು ವಾಹನವನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.