ತುಮಕೂರು : ಪ್ರಚೋದನಾತ್ಮಕ ಹೇಳಿಕೆ ನೀಡಿದ್ದ ಆರೋಪದ ಮೇಲೆ ಅತುಲ್ ಸಬರ್ವಾಲ್ ಅಲಿಯಾಸ್ ಮಧುಗಿರಿ ಮೋದಿಯನ್ನು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.
ಅನಂತಪುರ ಜಿಲ್ಲೆಯ ಆಜಾದ್ ನಗರದಲ್ಲಿ ವಶಕ್ಕೆ ಪಡೆದಿರುವ ಪೊಲೀಸರು ಆತನಿಂದ 2 ಮೊಬೈಲ್ ಜಪ್ತಿ ಮಾಡಿದ್ದಾರೆ. ಒಂದು ಕೋಮಿನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆ ರೆಕಾರ್ಡ್ ಮಾಡಿ ಫೆಬ್ರವರಿ 10ರಂದು ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿದ್ದ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅಲ್ಲದೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಅತುಲ್ ಸಬರ್ವಾಲ್ ವಿರುದ್ಧ ಇದೇ ತರಹದ ಪ್ರಕರಣಗಳು ದಾಖಲಾಗಿದ್ದವು. ಈತನ ಬಂಧನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು.