ETV Bharat / state

'ನೈಸರ್ಗಿಕ ಗಣಪತಿ ಬಳಸೋಣ': ತುಮಕೂರಿನಲ್ಲಿ ಜಾಗೃತಿ ಜಾಥಾ - Natural Ganapathi

ನೈಸರ್ಗಿಕ ಗಣಪತಿಯನ್ನು ಬಳಸುವ ಮೂಲಕ ಹಬ್ಬವನ್ನು ಪರಿಸರ ಸ್ನೇಹಿಯಾಗಿಸುವ ನಿಟ್ಟಿನಲ್ಲಿ ವಿವಿಧ ಸಂಘಟನೆಗಳಿಂದ ತುಮಕೂರಿನಲ್ಲಿ ಜಾಗೃತಿ ಜಾಥಾ ನಡೆಯಿತು.

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕಾಗಿ ಜಾಗೃತಿ ಜಾಥಾ ನಡೆಯಿತು
author img

By

Published : Aug 23, 2019, 10:55 AM IST

ತುಮಕೂರು: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸುವ ನಿಟ್ಟಿನಲ್ಲಿ ವಿವಿಧ ಸಂಸ್ಥೆಗಳ ವತಿಯಿಂದ ಜಾಗೃತಿ ಜಾಥಾ ನಡೆಯಿತು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸರ್ವೋದಯ ಪದವಿ ಪೂರ್ವ ಕಾಲೇಜು, ಸ್ಕೌಟ್ಸ್ ಆ್ಯಂಡ್‌ ಗೈಡ್ಸ್, ತುಮಕೂರು ವಿಜ್ಞಾನ ಕೇಂದ್ರ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕಾಗಿ ಜಾಗೃತಿ ಜಾಥಾ

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಕಾನೂನು ಸೇವಾ ಪ್ರಾಧಿಕಾರದ ನ್ಯಾಯಾಧೀಶ ಪಾಟೀಲ್ ಮಾತನಾಡಿ, ಜನಸಂಖ್ಯೆಯಿಂದ ಈಗಾಗಲೇ ಪರಿಸರ ಮಲಿನವಾಗುತ್ತಾ ಬಂದಿದೆ. ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡುವ ನಿಟ್ಟಿನಲ್ಲಿ ಮೊದಲು ನಾವು ಜಾಗೃತರಾಗಬೇಕು. ಆ ಮೂಲಕ ನಮ್ಮ ಸುತ್ತಮುತ್ತಲಿನ ಜನರಿಗೆ ಅರಿವು ಮೂಡಿಸಬೇಕಾಗಿದೆ. ಹಬ್ಬಕ್ಕೆ ನೈಸರ್ಗಿಕ ಗಣಪತಿಯನ್ನು ಎಲ್ಲರೂ ಕೊಳ್ಳೋಣ. ಪ್ಲಾಸ್ಟಿಕ್ ವಸ್ತುಗಳಿಂದ ದೂರವಿರೋಣ. ಆ ಮೂಲಕ ಎಲ್ಲರೂ ಕಾರ್ಯ ಪ್ರವೃತ್ತರಾಗಬೇಕಿದೆ, ಪರಿಸರದ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ರು.

Intro:ತುಮಕೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸರ್ವೋದಯ ಪದವಿ ಪೂರ್ವ ಕಾಲೇಜು, ಸ್ಕೌಟ್ಸ್ ಅಂಡ್ ಗೈಡ್ಸ್, ತುಮಕೂರು ವಿಜ್ಞಾನ ಕೇಂದ್ರ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ಪರಿಸರ ಸ್ನೇಹಿ ಗಣಪತಿ ಹಬ್ಬ ಆಚರಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಜಾಥಾ ಹಮ್ಮಿಕೊಳ್ಳಲಾಗಿತ್ತು.

Body:ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕಾನೂನು ಸೇವಾ ಪ್ರಾಧಿಕಾರದ ನ್ಯಾಯಾಧೀಶ ಪಾಟೀಲ್, ಜನಸಂಖ್ಯೆಯಿಂದ ಈಗಾಗಲೇ ಪರಿಸರ ಮಲಿನವಾಗುತ್ತ ಬಂದಿದೆ. ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡುವ ನಿಟ್ಟಿನಲ್ಲಿ ಮೊದಲು ನಾವು ಜಾಗೃತರಾಗಬೇಕು, ಆ ಮೂಲಕ ನಮ್ಮ ಸುತ್ತಮುತ್ತಲಿನ ಜನರಿಗೆ ಅರಿವು ಮೂಡಿಸಬೇಕಿದೆ ಎಂದರು.
ಮುಂದೆ ಬರುತ್ತಿರುವ ಗಣಪತಿ ಹಬ್ಬಕ್ಕೆ ನೈಸರ್ಗಿಕ ಗಣಪತಿಯನ್ನು ಎಲ್ಲರೂ ಕೊಳ್ಳೋಣ, ಪ್ಲಾಸ್ಟಿಕ್ ವಸ್ತುಗಳಿಂದ ದೂರವಿರೋಣ ಆ ಮೂಲಕ ಎಲ್ಲರೂ ಕಾರ್ಯ ಪ್ರವೃತ್ತರಾಗಬೇಕಿದೆ. ಪರಿಸರದ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನ್ಯಾಯಾಧೀಶ ಪಾಟೀಲ್ ತಿಳಿಸಿದರು.
ಬೈಟ್: ಪಾಟೀಲ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನ್ಯಾಯಾಧೀಶ.

Conclusion:ವರದಿ
ಸುಧಾಕರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.