ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಪ್ರತಿಪಕ್ಷವಾಗಿ ಕೆಲವು ವಿಚಾರಗಳನ್ನು ವಿರೋಧಿಸಬೇಕು. ಹಾಗಾಗಿ ವಿರೋಧಿಸುತ್ತಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವಾಗ ಪದಗ್ರಹಣ ಮಾಡಬೇಕು ಎಂಬುದು ಅವರಿಗೇ ಬಿಟ್ಟ ವಿಚಾರವಾಗಿದೆ. ಇದರಲ್ಲಿ ರಾಜಕೀಯ ಮಾಡುವಂಥದ್ದು ಎನೂ ಇಲ್ಲ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ ಸಂಬಂಧ ಕಾನೂನಿನಲ್ಲಿ ಏನು ಅವಕಾಶ ಇದೆಯೋ ಅದೇ ರೀತಿ ಮಾಡಬೇಕು. ವಿನಾ ಕಾರಣ ಎಲ್ಲೆಲ್ಲಿಗೋ ಹೋಲಿಸುವುದು ಸರಿಯಲ್ಲ ಎಂದು ಕೈ ಮುಖಂಡರ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದರು.