ETV Bharat / state

ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ: 16 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ತುಮಕೂರಿನಲ್ಲಿ ಶಾಲೆ ಆವರಣದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಡೆದಿದೆ.

ಮಕ್ಕಳ ಮೇಲೆ ಜೇನು ದಾಳಿ
ಮಕ್ಕಳ ಮೇಲೆ ಜೇನು ದಾಳಿ
author img

By ETV Bharat Karnataka Team

Published : Dec 15, 2023, 1:54 PM IST

ತುಮಕೂರು: ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ ಮಾಡಿದ್ದು 16 ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿಯಲ್ಲಿ ನಡೆದಿದೆ. ಶಾಲೆಯ ಪಕ್ಕದಲ್ಲಿರುವ ತೋಟದಲ್ಲಿ ಗೂಡು ಕಟ್ಟಿದ್ದ ಜೇನು ನೊಣಗಳು, ಇಂದು ಬೆಳಗ್ಗೆ ಶಾಲೆ ಆರಂಭಕ್ಕೂ ಮೊದಲು ಆವರಣದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ದಾಳಿ ಮಾಡಿವೆ.

ಈ ವೇಳೆ, 20ಕ್ಕೂ ಹೆಚ್ಚು ಮಕ್ಕಳ ಮೇಲೆ ಜೇನು ನೋಣಗಳು ಏಕಾಏಕಿ ದಾಳಿ ನಡೆಸಿದ ಪರಿಣಾಮ ಮಕ್ಕಳ ಬೆನ್ನು, ಕುತ್ತಿಗೆ, ಮುಖ, ತಲೆಗೆ ಗಾಯಗಳಾಗಿವೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಶಿರಾ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಶಿರಾ ತಹಶೀಲ್ದಾರ್ ದತ್ತಾತ್ರೇಯ, ಡಿವೈಎಸ್ಪಿ ಶೇಖರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.

ಪ್ರತ್ಯೇಕ ಪ್ರಕರಣ, ದ್ವಿಚಕ್ರ ವಾಹನಕ್ಕೆ ಕಾರು‌ ಡಿಕ್ಕಿ: ದ್ವಿಚಕ್ರ ವಾಹನಕ್ಕೆ ಇನೋವಾ ಕಾರು‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬಾಲಕರು ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ಪ್ರಥಮ್(15), ವಿಜಯ್(15) ಮೃತ ಬೈಕ್ ಸವಾರರಾಗಿದ್ದಾರೆ. ತುಮಕೂರು ನಗರದ ಶೆಟ್ಟಿಹಳ್ಳಿ ವೃತ್ತದ ಬಳಿ ನಡೆದ ಅಪಘಾತವಾಗಿದ್ದು, ಮೃತ ಬಾಲಕರು ಕೌತಮಾರನಹಳ್ಳಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಈ ಸಂಬಂಧ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ದಾಟುವಾಗ ಬೈಕ್​​ ಡಿಕ್ಕಿ: ರಸ್ತೆ ದಾಟುವಾಗ ಬೈಕ್​​ ಡಿಕ್ಕಿ ಹೊಡೆದ ಪರಿಣಾಮ ಕಾಂಗ್ರೆಸ್​ ವಿಧಾನ ಪರಿಷತ್ ಸದಸ್ಯ ಅರವಿಂದ ಕುಮಾರ್ ಅರಳಿ ಅವರ ತಾಯಿ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ರಸ್ತೆಯ ಟೊಯೋಟಾ ಶೋರೂಂ ಹತ್ತಿರ ನಿನ್ನೆ ನಡೆದಿತ್ತು. ಅಪಘಾತ ಎಸೆಗಿರುವ ವ್ಯಕ್ತಿ ಬೈಕ್​ ಸಮೇತ ಪರಾರಿಯಾಗಿದ್ದಾನೆ. ಬೀದರ್ ಜಿಲ್ಲೆ ಹಳ್ಳಿಖೇಡ (ಬಿ) ಗ್ರಾಮದವರಾದ ಸುಮಿತ್ರಾಬಾಯಿ ಶಾಮರಾವ್​ ಅರಳಿ (75) ಮೃತಪಟ್ಟವರು ಎಂದು ಗುರುತಿಸಲಾಗಿತ್ತು.

ಅಪಘಾತದಲ್ಲಿ ದಂಪತಿ ಸಾವು: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ದಂಪತಿ ಮೃತಪಟ್ಟ ಘಟನೆ ಕಳೆದ ಎರಡು ದಿನಗಳ ಹಿಂದೆ ಚಿಂತಾಮಣಿ ತಾಲೂಕಿನ ನಾಯಿಂದ್ರಹಳ್ಳಿ ಬಳಿ ನಡೆದಿತ್ತು. ಮೃತರನ್ನು ಕೋಲಾರ ತಾಲೂಕಿನ ಚನ್ನಸಂದ್ರ ಗ್ರಾಮದ ನಿವಾಸಿಗಳಾದ ಸುಬ್ರಮಣಿ (55 ), ಗಾಯಿತ್ರಮ್ಮ (50) ಎಂದು ಗುರುತಿಸಲಾಗಿತ್ತು.

ಇದನ್ನೂ ಓದಿ: ಹೆಚ್​ ಡಿ ಕೋಟೆ ಮಿನಿ ವಿಧಾನಸೌಧದಲ್ಲಿ ಹೆಜ್ಜೇನು ದಾಳಿ; ಕೆಲವರಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.