ETV Bharat / state

ಮದುವೆಗೆ 10 ದಿನ ಬಾಕಿ ಇರುವಾಗಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಯುವತಿ - Tumkur student suicide

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ಮದುವೆಗೆ ಹತ್ತು ದಿನ ಬಾಕಿ ಇರುವಾಗಲೇ ಯುವತಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..

ಆತ್ಮಹತ್ಯೆಗೆ ಶರಣಾದ ಯುವತಿ
ಆತ್ಮಹತ್ಯೆಗೆ ಶರಣಾದ ಯುವತಿ
author img

By

Published : May 15, 2022, 2:16 PM IST

ತುಮಕೂರು : ಮದುವೆಗೆ ಹತ್ತು ದಿನ ಬಾಕಿ ಇರುವಾಗಲೇ ಯುವತಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಥಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ ತೇಜ (19) ಆತ್ಮಹತ್ಯೆ ಮಾಡಿಕೊಂಡ ಯುವತಿ.

ಮೇ 24 ಮತ್ತು 25ರಂದು ಈಕೆಯ ವಿವಾಹ ನಿಶ್ಚಯವಾಗಿತ್ತು. ಪೋಷಕರು ಮದುವೆಯ ಆಮಂತ್ರಣ ಪತ್ರಿಕೆಯನ್ನು ಸಂಬಂಧಿಕರಿಗೆ ಕೊಟ್ಟು ಆಹ್ವಾನಿಸುವ ಸಿದ್ಧತೆಯಲ್ಲಿ ತೊಡಗಿದ್ದರು. ಆದ್ರೆ, ಇಂದು ಮುಂಜಾನೆ ಮನೆಯಲ್ಲಿಯೇ ಯುವತಿ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತೀವ್ರವಾಗಿ ಸುಟ್ಟ ಗಾಯಗಳಿಂದ ನರಳಾಡುತ್ತಿದ್ದ ಯುವತಿಯನ್ನು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ. ಈ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದೆಹಲಿ ಅಗ್ನಿ ದುರಂತದಲ್ಲಿ 27 ಮಂದಿ ಬಲಿ : 50 ಜನರ ಪಾಲಿಗೆ ಆಪದ್ಬಾಂಧವನಾದ ಕ್ರೇನ್​ ಚಾಲಕ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.