ತುಮಕೂರು: ದ್ವಿಚಕ್ರ ವಾಹನ ಚಾಲಕನ ನಿಯಂತ್ರಣ ತಪ್ಪಿ ಆಕಸ್ಮಿಕವಾಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಧುಗಿರಿ ತಾಲೂಕಿನ ಬ್ರಹ್ಮಸಂದ್ರ ಗೇಟ್ ಬಳಿ ನಡೆದಿದೆ.
ಮಧುಗಿರಿ ಪಟ್ಟಣದ ಹರೀಶ್ (26) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ಪ್ರದೀಪ್ (24) ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.