ತುಮಕೂರು: ಶಿರಾ ವಿಧಾನಸಭಾ ಉಪಚುನಾವಣೆಯಲ್ಲಿ ಮೂಲ ಕಾರ್ಯಕರ್ತರಿಗೆ ಟಿಕೆಟ್ ನೀಡದೆ ಅನ್ಯಾಯ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎದುರು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಶಿರಾ ಎನ್ಎಚ್-4 ಬಳಿ ಇರುವ ಗುಮ್ಮನಹಳ್ಳಿ ಗೇಟ್ನ ಕರಿಯಮ್ಮ ದೇವಸ್ಥಾನದ ಹತ್ತಿರ ಬಿಜೆಪಿ ಕಾರ್ಯಕರ್ತರ ಮತ್ತು ಅಭಿಮಾನಿಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಚಿತ್ರದುರ್ಗ ಸಂಸದ ನಾರಾಯಣಸ್ವಾಮಿ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಹಾಜರಿದ್ದರು.
ಶಿರಾ ತಾಲೂಕಿನ ನೂರಾರು ಬಿಜೆಪಿ ಕಾರ್ಯಕರ್ತರು ಸಭೆಯಲ್ಲಿ ಭಾಗಿಯಾಗಿದ್ದರು. ಸಂಸದ ನಾರಾಯಣಸ್ವಾಮಿ ಅವರು ಶಿರಾ ತಾಲ್ಲೂಕಿಗೆ ಏನು ಕೊಡುಗೆ ನೀಡಿದ್ದಾರೆ ಎಂದು ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡರು.
ಮೋದಿ, ಯಡಿಯೂರಪ್ಪ ಅವರನ್ನು ನಾವು ಕಂಡಿಲ್ಲ. ಆದರೆ ಇಲ್ಲಿ ಮೂಲ ಬಿಜೆಪಿ ಕಾರ್ಯಕರ್ತರು ಇದ್ದಾರೆ. ಆದ್ರೆ ಇಲ್ಲಿ ಕಾರ್ಯಕರ್ತರಿಗೆ ಬೆಲೆ ಇಲ್ಲದಂತಾಗಿದೆ ಎಂದರು.