ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಜೊತೆ ಬಂದ ರಾಜೇಶ್ ಗೌಡ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ನಂದಿನಿ ದೇವಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ವೇಳೆ ಅಭ್ಯರ್ಥಿ ಸೇರಿದಂತೆ ಮೂವರಿಗೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿತ್ತು. ಹೀಗಾಗಿ ಅಭ್ಯರ್ಥಿ ಡಾ.ರಾಜೇಶ್ ಗೌಡ ಜೊತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಬಿಜೆಪಿ ಶಿರಾ ನಗರಾಧ್ಯಕ್ಷ ವಿಜಯರಾಜ್ ಹಾಜರಿದ್ದರು.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಓಬಳೇಶಪ್ಪ ಉಮೇದುವಾರಿಕೆ ಸಲ್ಲಿಕೆ...
ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಓಬಳೇಶಪ್ಪ ತಮ್ಮ ನಾಮಪತ್ರ ಸಲ್ಲಿಸಿದರು. ಪಕ್ಷದ ಮುಖಂಡ ಮಲ್ಲಿಕಾರ್ಜುನ ಭಟ್ಟರಹಳ್ಳಿ ಸೇರಿದಂತೆ ಪಕ್ಷದ ಮುಖಂಡರು ಹಾಜರಿದ್ದರು. ಚುನಾವಣಾಧಿಕಾರಿ ಡಾ. ನಂದಿನಿ ದೇವಿ ಅವರಿಗೆ ನಾಮಪತ್ರ ಸಲ್ಲಿಸಲಾಯಿತು.