ETV Bharat / state

ಕಾಂಗ್ರೆಸ್​​ ಬಲ ಕುಗ್ಗಿಸೋದೆ ಬಿಜೆಪಿ ಬಯಕೆ, ಅದಕ್ಕೇ ಈ ದಾಳಿ:  ರಾಮಕೃಷ್ಣ ಕಿಡಿಕಿಡಿ - ಐಟಿ ದಾಳಿ ವಿಚಾರ

​ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಮನೆ, ಸಂಸ್ಥೆಗಳ ಮೇಲೆ ಉದ್ದೇಶಪೂರ್ವಕವಾಗಿ ಬಿಜೆಪಿ ಸರ್ಕಾರ ಐಟಿ ದಾಳಿ ನಡೆಸಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ ಬಲವನ್ನು ಕುಗ್ಗಿಸುವ ಉದ್ದೇಶ ಹೊಂದಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಆರ್. ರಾಮಕೃಷ್ಣ ಆರೋಪಿಸಿದ್ದಾರೆ

congress pressmeet
author img

By

Published : Oct 11, 2019, 3:27 PM IST

ತುಮಕೂರು: ಕಾಂಗ್ರೆಸ್ ಪಕ್ಷದ ಬಲವನ್ನು ಕುಗ್ಗಿಸುವ ಉದ್ದೇಶದಿಂದ ಕೇಂದ್ರ ಬಿಜೆಪಿ ಸರ್ಕಾರ ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಶ್ರೀಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ಐಟಿ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಆರ್. ರಾಮಕೃಷ್ಣ ಆರೋಪಿಸಿದ್ದಾರೆ.

ನಗರದಲ್ಲಿ ನಡೆದ ಕಾಂಗ್ರೆಸ್​ ಸುದ್ದಿಗೋಷ್ಠಿ

ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಡಿ, ಸಿಬಿಐ, ಐಟಿ, ಚುನಾವಣಾ ಆಯೋಗ ಇವೆಲ್ಲವೂ ಸರ್ಕಾರದ ಸ್ವಾಯತ್ತ ಸಂಸ್ಥೆಗಳು. ಮೋದಿ ಹೇಳಿದಂತೆ ಇಲಾಖೆಗಳು ಕೇಳುತ್ತಿವೆ. ರಾಷ್ಟ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡರ ಮೇಲೆ ದಾಳಿ ಮಾಡಿಸುವ ಮೂಲಕ ಅವರನ್ನು ಬಂಧಿಸಲಾಗುತ್ತದೆ. ರಾಜ್ಯದಲ್ಲಿ ಅಧಿವೇಶನ ಶುರುವಾಗಿದೆ. ನೆರೆ ಸಮಸ್ಯೆಗೆ ಸಿಲುಕಿರುವ ಸಾರ್ವಜನಿಕರಿಗೆ ಪರಿಹಾರದ ಹಣ ಇಲ್ಲಿಯವರೆಗೂ ದೊರೆತಿಲ್ಲ. ಅದನ್ನು ಮರೆ ಮಾಚುವ ಉದ್ದೇಶದಿಂದ ರಾಜ್ಯದ ಜನರ ಗಮನ ಬೇರೆ ಕಡೆ ಸೆಳೆಯುವುದಕ್ಕಾಗಿ ಈ ರೀತಿ ದಾಳಿ ನಡೆಸುತ್ತಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಬಲ ಕುಗ್ಗಿಸಲು ಈ ತಂತ್ರ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

Intro:ತುಮಕೂರು: ಕಾಂಗ್ರೆಸ್ ಪಕ್ಷದ ಬಲವನ್ನು ಕುಗ್ಗಿಸುವ ಉದ್ದೇಶದಿಂದ ಕೇಂದ್ರದ ಬಿಜೆಪಿ ಸರ್ಕಾರ ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ಐಟಿ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಆರ್. ರಾಮಕೃಷ್ಣ ಬಿಜೆಪಿ ಸರ್ಕಾರದ ವಿರುದ್ಧ ಅಸಮಧಾನ ವ್ಯಕ್ತಪಡಿಸಿದರು.

Body:ಇಡಿ, ಸಿಬಿಐ, ಐಟಿ, ಚುನಾವಣಾ ಆಯೋಗ ಇವೆಲ್ಲವೂ ಸರ್ಕಾರದ ಸ್ವಾಯಕ್ತ ಸಂಸ್ಥೆಗಳು, ಮೋದಿ ಅವರು ಹೇಳಿದಂತೆ ಕೇಳುತ್ತೇವೆ. ರಾಷ್ಟ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡರ ಮೇಲೆ ದಾಳಿ ಮಾಡಿಸುವ ಮೂಲಕ ಅವರನ್ನು ಬಂಧಿಸಲಾಗುತ್ತದೆ. ರಾಜ್ಯದಲ್ಲಿ ಅಧಿವೇಶನ ಶುರುವಾಗಿದೆ, ನೆರೆಯ ಸಮಸ್ಯೆಗೆ ಸಿಲುಕಿರುವ ಸಾರ್ವಜನಿಕರಿಗೆ ಪರಿಹಾರದ ಹಣ ಇಲ್ಲಿಯವರೆಗೂ ದೊರೆತಿಲ್ಲ. ಅದನ್ನು ಮರೆಮಾಚುವ ಉದ್ದೇಶದಿಂದ ರಾಜ್ಯದ ಜನರ ಗಮನ ಬೇರೆ ಕಡೆ ಸೆಳೆಯುವುದಕ್ಕಾಗಿ ಈ ರೀತಿ ದಾಳಿ ನಡೆಸುತ್ತಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬಲವನ್ನು ಕುಗ್ಗಿಸಲು ಈ ತಂತ್ರ ಅನುಸರಿಸುತ್ತಿದ್ದಾರೆ ಎಂದರು.
ಬೈಟ್: ಆರ್. ರಾಮಕೃಷ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ.
ನಂತರ ಮಾತನಾಡಿದ ಜಿಲ್ಲಾ ಪಂಚಾಯತ್ ಸದಸ್ಯ ಕೆಂಚಮಾರಯ್ಯ, ಮೋದಿ ಮತ್ತು ಅಮಿತ್ ಷಾ ದೇಶದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುವ ವ್ಯವಸ್ಥೆ ನಿರ್ಮಾಣವಾಗಿದೆ. ಸರ್ಕಾರದ ಸ್ವಯಕ್ತ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ. ಶಿಕ್ಷಣ ಭೀಷ್ಮ ಎಂದೇ ಹೆಸರುವಾಸಿಯಾಗಿದ್ದ ಗಂಗಾಧರಯ್ಯ ಅವರು ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರು, ಅವರ ಪುತ್ರರಾದ ಡಾ.ಜಿ ಪರಮೇಶ್ವರ್ ಅವರು ಆ ಸಂಸ್ಥೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ, ಇಲ್ಲಿಯವರೆಗೂ ಆ ಶಿಕ್ಷಣ ಸಂಸ್ಥೆಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಇಗ ಶಿಕ್ಷಣ ಸಂಸ್ಥೆಯಲ್ಲಿ ಅಕ್ರಮ ನಡೆದಿದೆ ಎಂದು ದುರುದ್ದೇಶ ಇಟ್ಟುಕೊಂಡು ದಾಳಿ ನಡೆಸಿರುವುದು ಖಂಡನೀಯ. ಶಿಕ್ಷಣವನ್ನು ದಂಧೆಯಾಗಿ ನಡೆಸದೇ ಸೇವಾ ಮನೋಭಾವದಿಂದ ಶಿಕ್ಷಣ ನೀಡುವ ಸಂಸ್ಥೆಯ ಮೇಲೆ ಕಪ್ಪುಚುಕ್ಕೆ ಬರುವಂತೆ ಮಾಡಲು ಈ ರೀತಿ ಮಾಡಲಾಗಿದೆ. ಜೊತೆಗೆ ನೆರೆಯ ರಾಜ್ಯವಾದ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಚುನಾವಣೆಯ ಜವಾಬ್ದಾರಿಯನ್ನು ಪರಮೇಶ್ವರ್ ಅವರಿಗೆ ನೀಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಈ ರೀತಿ ನಡೆಸಿದೆ ಎಂದರು.
ಬೈಟ್: ಕೆಂಚಮಾರಯ್ಯ, ಜಿ.ಪಂ ಸದಸ್ಯ

Conclusion:ವರದಿ
ಸುಧಾಕರ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.