ತುಮಕೂರು: ಜಿಲ್ಲಾ ಪ್ರವಾಸ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಭೇಟಿ ನೀಡಿ ದರ್ಶನ ಪಡೆದರು.
ಇದೇ ವೇಳೆ ಸುಮಾರು ಹತ್ತು ನಿಮಿಷಗಳಿಗೂ ಹೆಚ್ಚು ಕಾಲ ಗದ್ದುಗೆ ಬಳಿ ನಿಂತು ಪ್ರಾರ್ಥನೆ ಮಾಡಿ, ವಿಶೇಷ ಪೂಜೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಸದ ಜಿ. ಎಸ್. ಬಸವರಾಜು ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.