ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ವೊಂದು ಸೇತುವೆಗೆ ಡಿಕ್ಕಿ ಹೊಡೆದು ಸಿಲುಕಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಅರೇನಹಳ್ಳಿ ಗೇಟ್ ಬಳಿ ನಡೆದಿದೆ. ಅದೃಷ್ಟವಶಾತ್, ಯಾವುದೇ ಸಾವು ಸಂಭವಿಸಿಲ್ಲ. ಆದ್ರೆ ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಬೆಂಗಳೂರು-ಹೊನ್ನಾವರ ಚತುಷ್ಪಥ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು, ಅರೇನಹಳ್ಳಿ ಗೇಟ್ ಬಳಿಯ ಸೇತುವೆಗೆ ಬಸ್ ಡಿಕ್ಕಿ ಹೊಡೆದಿದೆ. ಆದ್ರೆ ಸೇತುವೆ ಕೆಳಗೆ ಬಸ್ ಉರುಳಿಲ್ಲ. ಬದಲಾಗಿದ್ದ ಡಿಕ್ಕಿ ಹೊಡೆದು ಸೇತುವೆ ತಡೆಗೋಡೆಗೆ ಸಿಲುಕಿಕೊಂಡಿದೆ. ಬೆಂಗಳೂರಿನಿಂದ ಕಡೂರಿಗೆ ಬಸ್ ತೆರಳುತ್ತಿತ್ತು. ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ಮತ್ತೊಂದು ಬಸ್‌ನಲ್ಲಿ ಕಳುಹಿಸಲಾಗಿದೆ. ಸ್ಥಳಕ್ಕೆ ಗುಬ್ಬಿ ಪೊಲೀಸರು ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಹಾವೇರಿಯಲ್ಲಿ ವರುಣನ ಅಬ್ಬರ: ಸಿಡಿಲು ಬಡಿದು ಬಾಲಕ ಸಾವು