ETV Bharat / state

ಬಸ್ ಅಪಘಾತ: ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಸಾಂತ್ವನ ಹೇಳಿದ ಮಾಧುಸ್ವಾಮಿ, ಪರಮೇಶ್ವರ್ - ತುಮಕೂರು ಬಸ್ ಅಪಘಾತ

ಆಸ್ಪತ್ರೆಗೆ ಭೇಟಿ ನೀಡಿದ ಮಾಧುಸ್ವಾಮಿ ಹಾಗೂ ಜಿ ಪರಮೇಶ್ವರ್ ಅವರು ಗಾಯಾಳುಗಳು ಮತ್ತು ಅವರ ಕುಟುಂಬಸ್ಥರಿಗೆ ಧೈರ್ಯ ತುಂಬಿ, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದವರಿಗೆ ಪೂರಕ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು.

ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಸಾಂತ್ವನ ಹೇಳಿದ ಮಾಧುಸ್ವಾಮಿ, ಪರಮೇಶ್ವರ್

author img

By

Published : Feb 20, 2021, 5:02 AM IST

ತುಮಕೂರು: ಖಾಸಗಿ ಬಸ್ ಉರುಳಿ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ 20ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್ ಭೇಟಿ ನೀಡಿ ಸಾಂತ್ವನ ಹೇಳಿದರು.

ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಸಾಂತ್ವನ ಹೇಳಿದ ಮಾಧುಸ್ವಾಮಿ

ಅನೇಕ ಮಂದಿ ಗಾಯಾಳುಗಳನ್ನು ಶಿರಾ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮೇಕೆರಹಳ್ಳಿ ಗ್ರಾಮದ ಬಳಿ ಬಸ್ ಅಪಘಾತ ಸಂಭವಿಸಿತ್ತು. ಬಸ್ಸಿನಲ್ಲಿ ತೋವಿನಕೆರೆ, ಶಂಬೆನನಹಳ್ಳಿ, ಗೊಲ್ಲರಹಟ್ಟಿ ಗ್ರಾಮದಿಂದ ಶಿರಾ ತಾಲೂಕಿನ ಬುಕ್ಕಪಟ್ಟಣ ಗ್ರಾಮಕ್ಕೆ ಮದುವೆ ಕಾರ್ಯಕ್ರಮ ಪಾಲ್ಗೊಳ್ಳಲು ಮದುವೆ ದಿಬ್ಬಣ ಹೊರಟಿತ್ತು.

ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಿಗೆ ಸಾಂತ್ವನ ಹೇಳಿದ ಪರಮೇಶ್ವರ್

ಗಾಯಗೊಂಡವರಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ಗಂಭೀರವಾಗಿ ಗಾಯಗೊಂಡವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಗೆ ಭೇಟಿ ನೀಡಿದ ಮಾಧುಸ್ವಾಮಿ ಹಾಗೂ ಜಿ ಪರಮೇಶ್ವರ್ ಅವರು ಗಾಯಾಳುಗಳು ಮತ್ತು ಅವರ ಕುಟುಂಬಸ್ಥರಿಗೆ ಧೈರ್ಯ ತುಂಬಿ, ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದವರಿಗೆ ಪೂರಕ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ವೀರಭದ್ರಯ್ಯ ಸೇರಿದಂತೆ ವೈದ್ಯಕೀಯ ಸಿಬ್ಬಂದಿ ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.