ತುಮಕೂರು: ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಭೈರತಿ ಬಸವರಾಜ್, ಮೊದಲು ಚುನಾವಣೆಯಲ್ಲಿ 113 ಸ್ಥಾನದಲ್ಲಿ ಗೆಲ್ಲಲಿ. ಆ ನಂತರ ಮುಖ್ಯಮಂತ್ರಿ ಸ್ಥಾನದ ಬಗ್ಗೆ ತೀರ್ಮಾನಿಸಲಿ ಎಂದು ಟೀಕಿಸಿದ್ದಾರೆ.
ನಗರದಲ್ಲಿನ ಸ್ಮಾರ್ಟ್ ಸಿಟಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮಾಡಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರವೇ ಇಲ್ಲ ಎಂದು ಸ್ವಷ್ಟಪಡಿಸಿದರು.
ಈಗಾಗಲೇ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಅಲ್ಲದೇ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಮುಂದಿನ ಚುನಾವಣೆಯನ್ನು ಸಮರ್ಥವಾಗಿ ಎದುರಿಸುತ್ತೇವೆ. ಇದರಲ್ಲಿ ಯಾವದೇ ಗೊಂದಲವಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಸಿದ್ದು ಮುಂದಿನ ಸಿಎಂ ಅನ್ನೋದಕ್ಕೆ ಇದು ಟೂ ಅರ್ಲಿ, ಸಿಎಂ ಸ್ಥಾನ ಪತ್ರಾವಳಿ ಅಲ್ಲ: ವಿಶ್ವನಾಥ್