ತುಮಕೂರು: ನಗರದಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದರು. ಗದ್ದುಗೆ ಬಳಿ ತೆರಳಿ ಸಿಎಂ ನಂತರ ಮಂಗಳಾರತಿ ತೆಗೆದುಕೊಂಡರು.
ಇದೇ ಸಂದರ್ಭದಲ್ಲಿ ಮಠದ ಸಿದ್ಧಲಿಂಗ ಸ್ವಾಮೀಜಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು.
ಶಾಸಕರಾದ ಜ್ಯೋತಿ ಗಣೇಶ್, ಮಸಾಲೆ ಜಯರಾಮ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.