ETV Bharat / state

ಉಮೇದುವಾರಿಕೆ ಸಲ್ಲಿಕೆಗೂ ಮುನ್ನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ ಹೆಚ್ ಡಿ ದೇವೇಗೌಡ

ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆಯಲಿರುವ ಅವರು, ಮಾರ್ಚ್ 25ರಂದು ಸೋಮವಾರ ಮಧ್ಯಾಹ್ನ ಸರಿಯಾಗಿ 2.30ಕ್ಕೆ ತುಮಕೂರು ಲೋಕಸಭಾ ಕ್ಷೇತ್ರ ಚುನಾವಣಾಧಿಕಾರಿಯಾಗಿರುವ ರಾಕೇಶ್ ಕುಮಾರ್ ಅವರಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ.

author img

By

Published : Mar 24, 2019, 4:03 AM IST

Updated : Mar 24, 2019, 7:12 AM IST

ಹೆಚ್ ಡಿ ದೇವೇಗೌಡ

ತುಮಕೂರು: ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ಅವರುತುಮಕೂರು ಲೋಕಸಭಾ ಕ್ಷೇತ್ರಕ್ಕೆ ತಮ್ಮ ಉಮೇದುವಾರಿಕೆ ಸಲ್ಲಿಸಲು ಸಜ್ಜಾಗುತ್ತಿದ್ದು, ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆಯಲಿದ್ದಾರೆ.

ಇದಾದ ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆಯಲಿರುವ ಅವರು, ಮಾರ್ಚ್ 25ರಂದು ಸೋಮವಾರ ಮಧ್ಯಾಹ್ನ ಸರಿಯಾಗಿ 2.30ಕ್ಕೆ ತುಮಕೂರು ಲೋಕಸಭಾ ಕ್ಷೇತ್ರ ಚುನಾವಣಾಧಿಕಾರಿಯಾಗಿರುವ ರಾಕೇಶ್ ಕುಮಾರ್ ಅವರಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ.

ಇದಕ್ಕೂ ಮುನ್ನ ತುಮಕೂರು ನಗರದ ಟೌನ್ ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ತಮ್ಮ ಬೆಂಬಲಿಗರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಹೆಚ್ ಡಿ ದೇವೇಗೌಡ ಬರಲಿದ್ದಾರೆ.

ಮೆರವಣಿಗೆಯಲ್ಲಿ ಜಿಲ್ಲೆಯ ಶಾಸಕರು, ಸಚಿವರು, ಮಾಜಿ ಮಂತ್ರಿಗಳು , ಜಿಲ್ಲಾ ಪಂಚಾಯತ್ ಸದಸ್ಯರು, ಮಹಾನಗರ ಪಾಲಿಕೆ ಸದಸ್ಯರು, ಪುರಸಭೆ ಮತ್ತು ಗ್ರಾಮ ಪಂಚಾಯಿತಿ ಹಾಗೂ ಎಪಿಎಂಸಿ ಸದಸ್ಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬರಲಿದ್ದಾರೆ. ಮುಂಜಾಗ್ರತ ಕ್ರಮವಾಗಿ ತುಮಕೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಿಕೊಳ್ಳಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

ಪೊಲೀಸ್ ಮೂಲಗಳ ಪ್ರಕಾರ ಮಂಡ್ಯದಿಂದ ಹೆಲಿಕ್ಯಾಪ್ಟರ್ ಮುಖಾಂತರ ಮಾರ್ಚ್ 25ರಂದು ಬೆಳಗ್ಗೆ 11 ಗಂಟೆಗೆ ತುಮಕೂರಿಗೆ ದೇವೇಗೌಡರು ಆಗಮಿಸಲಿದ್ದಾರೆ.

Intro:ಉಮೇದುವಾರಿಕೆ ಸಲ್ಲಿಕೆಗೂ ಮುನ್ನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ಎಚ್ ಡಿ ದೇವೇಗೌಡ.......

ತುಮಕೂರು
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ತಮ್ಮ ಉಮೇದುವಾರಿಕೆ ಸಲ್ಲಿಸಲು ಸಜ್ಜಾಗುತ್ತಿದ್ದು ಮಾರ್ಚ್ 24 ರಂದು ಭಾನುವಾರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ದರ್ಶನ ಪಡೆಯಲಿದ್ದಾರೆ ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆಯಲಿದ್ದಾರೆ.

ಮಾರ್ಚ್ 25ರಂದು ಸೋಮವಾರ ಮಧ್ಯಾಹ್ನ ಸರಿಯಾಗಿ 2.30ಕ್ಕೆ ತುಮಕೂರು ಲೋಕಸಭಾ ಕ್ಷೇತ್ರ 19 ದಲ್ಲಿ ಚುನಾವಣಾಧಿಕಾರಿಯಾಗಿರುವ ರಾಕೇಶ್ ಕುಮಾರ್ ಅವರಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ ತುಮಕೂರು ನಗರದ ಟೌನ್ ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ತಮ್ಮ ಬೆಂಬಲಿಗರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಎಚ್ ಡಿ ದೇವೇಗೌಡ ಬರಲಿದ್ದಾರೆ.

ಮೆರವಣಿಗೆಯಲ್ಲಿ ಜಿಲ್ಲೆಯ ಶಾಸಕರು, ಸಚಿವರು, ಮಾಜಿ ಮಂತ್ರಿಗಳು , ಜಿಲ್ಲಾ ಪಂಚಾಯತ್ ಸದಸ್ಯರು, ಮಹಾನಗರ ಪಾಲಿಕೆ ಸದಸ್ಯರು , ಪುರ ಸಭೆ ಮತ್ತು ಗ್ರಾಮ ಪಂಚಾಯಿತಿ ಹಾಗೂ ಎಪಿಎಂಸಿ ಸದಸ್ಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬರಲಿದ್ದಾರೆ ಮುಂಜಾಗ್ರತ ಕ್ರಮವಾಗಿ ತುಮಕೂರು ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಿಕೊಳ್ಳಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

ಪೊಲೀಸ್ ಮೂಲಗಳ ಪ್ರಕಾರ ಮಂಡ್ಯದಿಂದ ಹೆಲಿಕ್ಯಾಪ್ಟರ್ ಮುಖಾಂತರ ಮಾರ್ಚ್ 25ರಂದು ಬೆಳಗ್ಗೆ 11 ಗಂಟೆಗೆ ತುಮಕೂರಿಗೆ ದೇವೇಗೌಡರು ಆಗಮಿಸಲಿದ್ದಾರೆ.

Body:
ತುಮಕೂರು

Conclusion:
Last Updated : Mar 24, 2019, 7:12 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.