ETV Bharat / state

ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಕ್ಯಾಬ್ ಚಾಲಕ - ಹಣಕಾಸಿನ ಸಮಸ್ಯೆ

ತೀವ್ರ ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದ ಕ್ಯಾಬ್ ಚಾಲಕನೊಬ್ಬ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

cab driver suicide
ಕ್ಯಾಬ್ ಚಾಲಕ ಆತ್ಮಹತ್ಯೆ
author img

By

Published : May 8, 2020, 11:52 AM IST

ತುಮಕೂರು: ಹಣಕಾಸಿನ ಸಮಸ್ಯೆಯಿಂದ ರೋಸಿ ಹೋಗಿದ್ದ ಕ್ಯಾಬ್ ಚಾಲಕನೊಬ್ಬ ನೇಣಿಗೆ ಶರಣಾಗಿದ್ದಾನೆ.

ಕ್ಯಾಬ್ ಚಾಲಕ ಆತ್ಮಹತ್ಯೆ

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯ ಸಮೀಪ ಈ ಘಟನೆ ನಡೆದಿದೆ. ಕೊರಟಗೆರೆ ತಾಲೂಕಿನ ಕೋಡ್ಲಹಳ್ಳಿ ಗ್ರಾಮದ ಮಧು (25) ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ್ಮಹತ್ಯೆಗೆ ಮುನ್ನ ವಿಡಿಯೋ ಮಾಡಿ ಸಂಬಂಧಿಕರೊಬ್ಬರಿಗೆ ವಾಟ್ಸ್​ಆ್ಯಪ್​​ ಮಾಡಿದ್ದಾನೆ.

ಬೆಂಗಳೂರು ನಗರದಲ್ಲಿ ಕಾರು ಚಾಲಕನಾಗಿದ್ದ ಮಧು ಕೊರೊನಾ ಲಾಕ್​​ಡೌನ್ ಹಿನ್ನೆಲೆ ಸ್ವಗ್ರಾಮಕ್ಕೆ ವಾಪಸ್​ ಆಗಿದ್ದ. ಮೃತ ದೇಹವನ್ನು ಕೊರಟಗೆರೆ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.