ETV Bharat / state

ಹುಳಿಯಾರು ಪಟ್ಟಣದ ವೃತ್ತಕ್ಕೆ ನಾಮಕರಣ ವಿಚಾರ: ಗೊಂದಲದ ಗೂಡಾದ ಶಾಂತಿಸಭೆ - Calm assembly failed in Tumkuru

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪಟ್ಟಣದಲ್ಲಿ ವೃತ್ತಕ್ಕೆ ನಾಮಕರಣ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಉಂಟಾಗಿದ್ದ ಗೊಂದಲ ನಿವಾರಿಸಲು ಕರೆಯಲಾಗಿದ್ದ ಶಾಂತಿಸಭೆ ವಿಫಲವಾಯಿತು.

ಗೊಂದಲದ ಗೂಡಾದ ಶಾಂತಿಸಭೆ
author img

By

Published : Nov 18, 2019, 1:53 PM IST

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪಟ್ಟಣದಲ್ಲಿ ವೃತ್ತಕ್ಕೆ ನಾಮಕರಣ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಉಂಟಾಗಿದ್ದ ಗೊಂದಲ ನಿವಾರಿಸಲು ಕರೆಯಲಾಗಿದ್ದ ಶಾಂತಿಸಭೆ ವಿಫಲವಾಯಿತು.

ಗೊಂದಲದ ಗೂಡಾದ ಶಾಂತಿಸಭೆ

ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈಶ್ವರಾನಂದ ಸ್ವಾಮೀಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಸಿಕೃಷ್ಣ ಭಾಗಿಯಾಗಿದ್ದರು. ಹುಳಿಯಾರಿನ ವೃತಕ್ಕೆ ಅಳವಡಿಸಲಾಗಿದ್ದ ಕನಕದಾಸ ಹೆಸರಿನ ನಾಮಫಲಕ ತೆರವುಗೊಳಿಸಲಾಗಿತ್ತು. ಇದರಿಂದ ಕುರುಬ ಸಮುದಾಯದವರಲ್ಲಿ ಅಸಮಾಧಾನ ಮನೆ ಮಾಡಿತ್ತು. ಇನ್ನೊಂದೆಡೆ ಸಭೆಯಲ್ಲಿ ಲಿಂಗಾಯತ ಸಮುದಾಯದವರು ಶ್ರೀ ಶಿವಕುಮಾರ ಸ್ವಾಮೀಜಿ ಹೆಸರು ಇಡುವಂತೆ ಆಗ್ರಹಿಸಿದರು. ಒಂದು ಹಂತದಲ್ಲಿ ಹುಳಿಯಾರು ಪಟ್ಟಣ ಪಂಚಾಯಿತಿಯ ಅನುಮತಿ ಮೇರೆಗೆ ನಾಮಫಲಕ ಇರಿಸುವಂತೆ ಸಚಿವ ಮಾಧುಸ್ವಾಮಿ ಸಲಹೆ ನೀಡಿದರು. ಈ ನಿಲುವಿಗೆ ವಿರೋಧ ವ್ಯಕ್ತಪಡಿಸಿದ ಈಶ್ವರಾನಂದ ಸ್ವಾಮೀಜಿ, ಕನಕದಾಸರ ಹೆಸರು ಇಡದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಇದಕ್ಕೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ನಂತರ ಸಭೆಯಲ್ಲಿ ಕುರುಬ ಸಮುದಾಯದ ಸ್ವಾಮೀಜಿಗೆ ಅವಮಾನವಾಗಿದೆ ಎಂದು ಆಕ್ರೋಶ ಹೊರಹಾಕಿದರು. ಸ್ಥಳದಲ್ಲಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಸಿಕೃಷ್ಣ ಸಭೆಯಲ್ಲಿದ್ದವರನ್ನು ಸಮಾಧಾನಪಡಿಸಿದರು.

Intro:Body:ಗೊಂದಲದ ಗೂಡಾದ ಶಾಂತಿಸಭೆ…..
ತುಮಕೂರು
ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪಟ್ಟಣದಲ್ಲಿ ವೃತ್ತಕ್ಕೆ ನಾಮಕರಣ ಮಾಡುವ ಸಂಬಂಧಪಟ್ಟಂತೆ ಉಂಟಾಗಿದ್ದ ಗೊಂದಲ ನಿವಾರಿಸಲು ಕರೆಯಲಾಗಿದ್ದ ಶಾಂತಿಸಭೆಯಲ್ಲಿ ಒಮ್ಮತಕ್ಕೆ ಬಾರದ ಹಿನ್ನೆಲೆ ಸಭೆ ವಿಫಲವಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಈಶ್ವರಾನಂದ ಸ್ವಾಮೀಜಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೋನ ವಂಸಿ ಕೃಷ್ಣ ಹಾಜರಿದ್ದರು.
ಹುಳಿಯಾರಿನ ವೃತಕ್ಕೆ ಅಳವಡಿಸಲಾಗಿದ್ದ ಕನಕದಾಸ ಹೆಸರಿನ ನಾಮಫಲಕ ತೆರವುಗೊಳಿಸಲಾಗಿತ್ತು. ಇದ್ರಿಂದ ಕುರುಬ ಸಮುದಾಯದವರಲ್ಲಿ ಅಸಮಾಧಾನ ಮನೆ ಮಾಡಿತ್ತು. ಇನ್ನೊಂದೆಡೆ ಸಭೆಯಲ್ಲಿ ಲಿಂಗಾಯತ ಸಮುದಾಯದವರು ಶ್ರೀ ಶಿವಕುಮಾರ ಸ್ವಾಮೀಜಿ ಹೆಸರು ಇಡುವಂತೆ ಆಗ್ರಹಿಸಿದ್ದರು.
ಒಂದು ಹಂತದಲ್ಲಿ ಹುಳಿಯಾರು ಪಟ್ಟಣ ಪಂಚಾಯಿತಿಯ ಅನುಮತಿ ಮೇರೆಗೆ ನಾಮಫಲಕ ಇರಿಸುವಂತೆ ಸಚಿವ ಮಾಧುಸ್ವಾಮಿ ಸಲಹೆ ನೀಡಿದರು. ಈ ನಿಲುವಿಗೆ ವಿರೋಧ ವ್ಯಕ್ತಪಡಿಸಿದ ಸಭೆಯಲ್ಲಿದ್ದ ಈಶ್ವರಾನಂದ ಸ್ವಾಮೀಜಿ, ಕನಕದಾಸ ಹೆಸರು ಇಡದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಇದಕ್ಕೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ನಂತರ ಸಭೆಯಲ್ಲಿ ಕುರುಬ ಸಮುದಾಯದ ಸ್ವಾಮೀಜಿಗೆ ಅವಮಾನವಾಗಿದೆ ಎಂದು ಆಕ್ರೋಶ ಹೊರಹಾಕಿದರು. ಸ್ಥಳದಲ್ಲಿದ್ದ ಜಿಲ್ಲಾ ಪೊಲೀಸ್ ವರಿಷ್ಟಾಧೀಕಾರಿ ಕೋನ ವಂಸಿ ಕೃಷ್ಣ ಸಭೇಯಲ್ಲಿದ್ದವರನ್ನು ಸಮಾಧಾನಪಡಿಸಿದರು.
ನಂತರ ಸಾಮಾಜಿಕ ಜಾಲತಾಣದಲ್ಲಿ ಸಚಿವ ಮಾಧುಸ್ವಾಮೀಗೆ ಅವಮಾನಕರ ರೀತಿಯಲ್ಲಿ ಪೋಸ್ಟ್ ಹಾಕಿಸಮುದಾಯದವರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.