ತುಮಕೂರು : ಜಿಲ್ಲೆಯ ಪಾವಗಡ ತಾಲೂಕಿನ ಕುರುಬರಹಳ್ಳಿಯ ಕೋವಿಡ್ ಆರೈಕೆ ಕೇಂದ್ರದಲ್ಲಿ ಮೂಲಸೌಲಭ್ಯವಿಲ್ಲದೆ ತೀವ್ರ ತೊಂದರೆಯಾಗಿದೆ ಎಂದು ಆರೋಪಿಸಿ ಸೋಂಕಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ.
ಸ್ಯಾನಿಟೈಸ್ ಮಾಡದೆ ಇರುವುದರಿಂದ ಹೊಸದಾಗಿ ರೋಗಿಗಳನ್ನು ತಂದು ಇಲ್ಲಿ ಬಿಡುತ್ತಿದ್ದಾರೆ. ಗುಣಮುಖರಾದವರು ಕೂಡ ಪುನಃ ಸೋಂಕಿಗೆ ಒಳಗಾಗುವಂತಹ ಸ್ಥಿತಿ ಇದೆ.
ಬೆಳಗ್ಗೆ 7 ಗಂಟೆ ಆದ್ರೂ ಬಿಸಿನೀರಿನ ವ್ಯವಸ್ಥೆ ಇರುವುದಿಲ್ಲ. ಶೌಚಾಲಯದಲ್ಲಿ ಸ್ವಚ್ಛತೆ ಇಲ್ಲದಂತಾಗಿದೆ. ಅಡುಗೆ ಮನೆಯಲ್ಲಿಯೂ ಸ್ವಚ್ಛತೆ ಕಾಪಾಡಿಲ್ಲ.
ಇದರಿಂದಾಗಿ ಕೋವಿಡ್ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಲು ಸಾಧ್ಯವಿಲ್ಲದಂತಾಗಿದೆ. ಹೀಗಾಗಿ, ಹೋಂ ಕ್ವಾರಂಟೈನ್ಗೆ ಅವಕಾಶ ಕಲ್ಪಿಸಿ ಕೊಡಬೇಕೆಂದು ಸೋಂಕಿತರು ಒತ್ತಾಯಿಸಿದ್ದಾರೆ.
ಸುಶಾಂತ್ ಸಿಂಗ್ ಸಾವು ಪ್ರಕರಣ: ಇಬ್ಬರು ಕೆಲಸಗಾರರ ವಿಚಾರಣೆ ನಡೆಸಿದ ಎನ್ಸಿಬಿ