ETV Bharat / state

ಸಿದ್ದಗಂಗಾ ಮಠದ ನೂತನ ಉತ್ತರಾಧಿಕಾರಿಗಳಿಗೆ ಗೌರವ ಸಮರ್ಪಿಸಿದ ಮುಖ್ಯಮಂತ್ರಿ ಬೊಮ್ಮಾಯಿ - ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ

ಮುಖ್ಯಮಂತ್ರಿ ಬೊಮ್ಮಾಯಿ ತುಮುಕೂರಿನ ಸಿದ್ದಗಂಗಾ ಮಠದ ನೂತನ ಉತ್ತರಾಧಿಕಾರಿಗಳನ್ನು ಭೇಟಿಯಾಗಿದ್ದಲ್ಲದೇ ಅವರಿಂದ ಆಶೀರ್ವಾದ ಪಡೆದುಕೊಂಡಿದ್ದಾರೆ.

cm
ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ
author img

By

Published : Apr 24, 2023, 12:20 PM IST

Updated : Apr 24, 2023, 1:18 PM IST

ನೂತನ ಉತ್ತರಾಧಿಕಾರಿಗಳಿಗೆ ಗೌರವ ಸಮರ್ಪಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ತುಮಕೂರು: ತುಮಕೂರಿನ ಸಿದ್ದಗಂಗಾ ಮಠದ ನೂತನ ಉತ್ತರಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೌರವ ಸಮರ್ಪಿಸಿದರು. ಸಿದ್ದಗಂಗಾ ಮಠದ ಹಳೆ ಮಠದ ಆವರಣದಲ್ಲಿ ಸಿದ್ದಗಂಗಾ ಮಠ ಸೇರಿದಂತೆ ವಿವಿಧ ಮಠಗಳ ಮೂರು ನೂತನ ಉತ್ತರ ಅಧಿಕಾರಿಗಳನ್ನು ಭೇಟಿಯಾದ ಬಸವರಾಜ ಬೊಮ್ಮಾಯಿ ಅವರಿಂದ ಆಶೀರ್ವಾದ ಪಡೆದರು.

ಅಲ್ಲದೆ ಸಿಎಂ ಬೊಮ್ಮಾಯಿ ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನವನ್ನು ಪಡೆದು, ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಇದೇ ಸಂದರ್ಭದಲ್ಲಿ ತುಮಕೂರು ಸಂಸದ ಜಿಎಸ್ ಬಸವರಾಜ, ಕೋಲಾರ ಸಂಸದ ಹಾಗೂ ಸ್ಥಳೀಯ ಬಿಜೆಪಿ ಅಭ್ಯರ್ಥಿ ಜ್ಯೋತಿ ಗಣೇಶ್ ಕೂಡ ಹಾಜರಿದ್ದರು.

ಇದನ್ನೂ ಓದಿ: ಚಾಣಕ್ಯನ ರೋಡ್ ಶೋಗೆ ಕ್ಷಣಗಣನೆ... ಶಾ ವಿರುದ್ಧ ಕೈ ಅಭ್ಯರ್ಥಿ ವ್ಯಂಗ್ಯ

ಪಟ್ಟನಾಯಕನಹಳ್ಳಿ ಮಠದಲ್ಲಿ ಪೂಜೆ ಸಲ್ಲಿಸುತ್ತಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು

ತುಮಕೂರಿನಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಂದ ಭರ್ಜರಿ ಪ್ರಚಾರ: ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಬಂದಿಳಿದಿದ್ದಾರೆ. ಹೆಲಿಕಾಪ್ಟರ್ ಮೂಲಕ ಜೆಡಿಎಸ್ ಭದ್ರಕೋಟೆಗೆ ಎಂಟ್ರಿ ಕೊಡ್ತಿರೋ ದೊಡ್ಡ ಗೌಡ್ರು, ಜೆಡಿಎಸ್ ಭದ್ರಕೋಟೆಯಾಗಿರುವ ಶಿರಾದಲ್ಲಿ ಪ್ರಚಾರ ನಡೆಸಲಿದ್ದಾರೆ. ಮೊದಲಿಗೆ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಮಠಕ್ಕೆ ಭೇಟಿ ನೀಡಿದ ಅವರು, ಶ್ರೀ ನಂಜಾವಧೂತ ಸ್ವಾಮೀಜಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಮಠದಲ್ಲಿ ವಿಶೇಷ ಪೂಜೆ ಹಾಗೂ ಅರ್ಚನೆಯನ್ನು ನೆರವೇರಿಸಿದರು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ನಡೆದ ಪೂಜಾ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಕುಳಿತು ಪೂಜೆ ವೀಕ್ಷಿಸಿದರು.

ಬಳಿಕ ಶಿರಾ ಕ್ಷೇತ್ರದ ಅಭ್ಯರ್ಥಿ ಉಗ್ರೇಶ್ ಪರ ಶಿರ ಪಟ್ಟಣದಲ್ಲಿ ಮತಯಾಚನೆ ಮಾಡಲಿದ್ದಾರೆ. ಬಳಿಕ ಮಧುಗಿರಿ ಕ್ಷೇತ್ರಕ್ಕೆ ಎಂಟ್ರಿ ಕೊಡಲಿದ್ದು, ಮಧುಗಿರಿ ಕ್ಷೇತ್ರದ ಅಭ್ಯರ್ಥಿ ವೀರಭದ್ರಯ್ಯ ಪರ ಮತಯಾಚನೆ ಮಾಡಲಿದ್ದಾರೆ. ಬಳಿಕ ಕೊರಟಗೆರೆ ಕ್ಷೇತ್ರಕ್ಕೆ ಆಗಮಿಸಲಿರುವ ಹೆಚ್.ಡಿ. ದೇವೇಗೌಡರು ಕೊರಟಗೆರೆ ಅಭ್ಯರ್ಥಿ ಸುಧಾಕರಲಾಲ್ ಪರ ಮತಯಾಚನೆ ಮಾಡಲಿದ್ದಾರೆ.

ತುಮಕೂರಿನಲ್ಲಿ ಪಕ್ಷ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಬೊಮ್ಮಾಯಿ: ನಿನ್ನೆಯ ದಿನ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತ ಪ್ರಚಾರ ನಡೆಸಿದರು. ಪ್ರಚಾರದ ಜೊತೆ ಭರ್ಜರಿ ರೋಡ್​ ಶೋ ನಡೆಸಿದ ಸಿಎಂ ಕಲ್ಪತರು ನಾಡಿನ ಜನರಿಗೆ ಅನೇಕ ಭರವಸೆಗಳನ್ನು ನೀಡಿದರು. ಗುಬ್ಬಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದಿಲೀಪ್​ ಕುಮಾರ್, ತಿಪಟೂರು ಕ್ಷೇತ್ರದಲ್ಲಿ ಶಿಕ್ಷಣ ಸಚಿವ ಬಿ ಸಿ ನಾಗೇಶ್​ ​ಪರ ಪ್ರಚಾರ, ರೋಡ್​ ಶೋ ನಡೆಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಈ ಅಭ್ಯರ್ಥಿಗಳ ಕಾರ್ಯಗಳನ್ನು ತಿಳಿಸಿ ಮುಂದೆಯೂ ಅವರನ್ನು ದೊಡ್ಡ ಮಟ್ಟದಲ್ಲಿ ಗೆಲ್ಲಿಸಬೇಕೆಂದು ಜನರಲ್ಲಿ ಸಿಎಂ ಮನವಿ ಮಾಡಿದರು.

ಇದನ್ನೂ ಓದಿ: ಯಾವಾಗ ಬೇಕಾದರೂ ಚುನಾವಣೆ ನಡೆಯಬಹುದು, ನಾವು ಸಿದ್ಧರಿದ್ದೇವೆ: ಉದ್ಧವ್ ಠಾಕ್ರೆ

ಇದನ್ನೂ ಓದಿ: ಬಸವಣ್ಣನವರ ಲೋಕತಂತ್ರ ವಿಶ್ವಕ್ಕೆ ಮಾದರಿ.. ರಾಹುಲ್​ ಗಾಂಧಿ

Last Updated : Apr 24, 2023, 1:18 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.